Heavy Rain | ಯಾದಗಿರಿಯಲ್ಲಿ ಭಾರಿ ಮಳೆ : ಮನೆಗಳಿಗೆ ನುಗ್ಗಿದ ನೀರು
ಯಾದಗಿರಿ : ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ.
ಕಳೆದ ಎರಡು ವಾರಗಳಿಂದ ಸುಮ್ಮನಿನ್ನ ಮಳೆರಾಯ ಮತ್ತೆ ಅಬ್ಬರಿಸಲು ಶುರು ಮಾಡಿದ್ದು, ನಿನ್ನೆ ರಾತ್ರಿ ಸತತ ನಾಲ್ಕು ಗಂಟೆಗಳ ಕಾಲ ಮಳೆ ಸುರಿದಿದೆ.
ಭಾರಿ ಮಳೆಯ ಕಾರಣ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿದ ನೀರು ನುಗ್ಗಿದೆ.
ವಾಡ್೯ ನಂಬರ್ ಮೂರರಲ್ಲಿ ಮನಗಳಿಗೆ ಚರಂಡಿ ನೀರು ನುಗ್ಗಿದೆ.
ಅವೈಜ್ಞಾನಿಕವಾಗಿ ಚರಂಡಿ ನಿರ್ಮಾಣ ಮಾಡಿದ ಹಿನ್ನೆಲೆ ಮನೆಗಳಿಗೆ ನೀರು ನುಗ್ಗಿದೆ.
ಇತ್ತ ಭಾರಿ ಮಳೆಯ ಕಾರಣ ರಸ್ತೆಗಳು ಜಲಮಯವಾಗಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು.
ಇತ್ತ ಚರಂಡಿ ನೀರಿನಲ್ಲೇ ಗ್ರಾಮಸ್ಥರು ಓಡಾಡುತ್ತಿದ್ದು, ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.







