ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಯುಯು ಲಲಿತ್ ಪ್ರಮಾಣ ವಚನ ಸ್ವೀಕಾರ…
ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಯುಯು ಲಲಿತ್ ಅವರು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದರು.
2014 ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡ ನ್ಯಾಯಮೂರ್ತಿ ಲಲಿತ್ ಅವರ ಅಧಿಕಾರಾವಧಿ ನವೆಂಬರ್ 8, 2022 ರಂದು ಕೊನೆಗೊಳ್ಳಲಿದೆ. ಬಾರ್‌ನಿಂದ ನೇರವಾಗಿ ಸುಪ್ರೀಂ ಕೋರ್ಟ್ ಪೀಠಕ್ಕೆ ಏರಿದ ಎರಡನೇ ಸಿಜೆಐ ಎಂಬ ವಿಶೇಷತೆಯನ್ನ ಇವರು ಹೊಂದಿದ್ದಾರೆ.
2ಜಿ ತರಂಗಾತರ ಹಂಚಿಕೆ ಪ್ರಕರಣದಲ್ಲಿ ಸಿಬಿಐ ಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಕಗೊಂಡಿದ್ದರು ಜೊತೆಗೆ ಸುಪ್ರೀಂ ಕೋರ್ಟ್‌ನ ಹಲವಾರು ಮಹತ್ವದ ತೀರ್ಪುಗಳ ಭಾಗವಾಗಿದ್ದಾರೆ.
ಶುಕ್ರವಾರದ ಮಾಜಿ ಸಿಜೆಐ ಎಣ್ ವಿ ರಮಣ ಅವರಿಗೆ ಎಸ್ ಸಿ ಬಿ ಎ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ನ್ಯಾಯಮೂರ್ತಿ ಲಲಿತ ಅವರು ಸಂಸ್ಥೆಯ ಮುಖ್ಯಸ್ಥರಾಗಿ ವರ್ಷವಿಡಿ ಕನಿಷ್ಠ 1 ಸಂವಿಧಾನ ಪೀಠದ ಕಾರ್ಯ ನಿರ್ವಹಣೆ ಖಚಿತಪಡಿಸಿಕೊಳ್ಳುವುದಾಗಿ ಹೇಳಿದರು.








