ಪಾಕ್ ವಿರುದ್ಧ ಭುವನೇಶ್ವರ್ ದಾಖಲೆ
ಏಷ್ಯಾಕಪ್-2022ರ ಅಂಗವಾಗಿ ಪಾಕಿಸ್ತಾನ ವಿರುದ್ಧದ ಮೊದಲ ಪಂದ್ಯದಲ್ಲಿ ಭಾರತ 5 ವಿಕೆಟ್‌ಗಳ ಜಯ ಸಾಧಿಸಿದೆ.
ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಸಿಕ್ಸರ್ ಬಾರಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.
ಪಾಂಡ್ಯ (ಅಜೇಯ 33) ಜೊತೆಗೆ ಜಡೇಜಾ (35) ಕೂಡ ನಿರ್ಣಾಯಕ ಇನ್ನಿಂಗ್ಸ್ ಆಡಿದರು.
ಇದಕ್ಕೂ ಮುನ್ನ ಪಾಂಡ್ಯ ಬೌಲಿಂಗ್‌ನಲ್ಲೂ ಬೊಂಬಾಟ್ ಪ್ರದರ್ಶನ ನೀಡಿದ್ರು.
ಮತ್ತೊಂದೆಡೆ ಈ ಪಂದ್ಯದಲ್ಲಿ ವೇಗಿ ಭುವನೇಶ್ವರ್ ಕುಮಾರ್ ಅದ್ಭುತ ಪ್ರದರ್ಶನ ನೀಡಿದರು.
ಈ ಪಂದ್ಯದಲ್ಲಿ ಭುವಿ ನಾಲ್ಕು ವಿಕೆಟ್ ಪಡೆಯುವ ಮೂಲಕ ಅಪರೂಪದ ಸಾಧನೆ ಮಾಡಿದರು.
ಭುವನೇಶ್ವರ್ ಕುಮಾರ್ ಟ್ವೆಂಟಿ-20ಯಲ್ಲಿ ಪಾಕಿಸ್ತಾನದ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡರು.
ಈ ಪಂದ್ಯದಲ್ಲಿ ಆಸಿಫ್ ಅಲಿಯನ್ನು ಔಟ್ ಮಾಡಿ ಈ ಸಾಧನೆ ಮಾಡಿದ್ದಾರೆ.
ಭುವಿ ಇದುವರೆಗೆ ಪಾಕಿಸ್ತಾನದ ವಿರುದ್ಧ 9 ವಿಕೆಟ್ ಪಡೆದಿದ್ದಾರೆ.
ಇದಕ್ಕೂ ಮುನ್ನ ಈ ದಾಖಲೆ ಟೀಂ ಇಂಡಿಯಾದ ಮಾಜಿ ಆಲ್ ರೌಂಡರ್ ಇರ್ಫಾನ್ ಪಠಾಣ್ (6 ವಿಕೆಟ್) ಹೆಸರಿನಲ್ಲಿತ್ತು.
ಈ ಪಟ್ಟಿಯಲ್ಲಿ ಭುವಿ 9 ವಿಕೆಟ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಹಾರ್ದಿಕ್ ಪಾಂಡ್ಯ 7 ವಿಕೆಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.