BHEL recruitment : 575 ಹುದ್ದೆಗೆ ಅರ್ಜಿ ಆಹ್ವಾನ
ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನಲ್ಲಿ ಹುದ್ದೆ
ಟ್ರೇಡ್, ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ
ಪಿಯುಸಿ, ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೆಪ್ಟೆಂಬರ್ 5
ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.
ಬರೋಬ್ಬರಿ 575 ಅಪ್ರೆಂಟಿಸ್ ಹುದ್ದೆಗಳಿಗೆ ಬಿಹೆಡ್ ಇ ಎಲ್ ಅರ್ಜಿ ಆಹ್ವಾನಿಸಿದೆ.
ಟ್ರೇಡ್, ಗ್ರಾಜುಯೆಟ್ ಮತ್ತು ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಪಿಯುಸಿ, ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
2022 – 23 ನೇ ಸಾಲಿಗೆ ಈ ಹುದ್ದೆಗಳಿಗೆ ನೇಮಕ ಮಾಡಲಾಗಿದ್ದು, ಹುದ್ದೆ ಅವಧಿ ಒಂದು ವರ್ಷಗಳ ಕಾಲ ಆಗಲಿದೆ.

ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಕೆಲಸ ಮಾಡಬೇಕಾಗುತ್ತದೆ.
ಈ ಹುದ್ದೆಗಳಿ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಯ ವಯೋಮಿತಿ ಹೀಗಿದೆ ,ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ.
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು 25 ಆಗಸ್ಟ್ 2022 ಪ್ರಾರಂಭದ ದಿನಾಂಕವಾದರೇ ಸೆಪ್ಟೆಂಬರ್ 07 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ.
ಅಧಿಕೃತ ವೆಬ್ ಸೈಟ್ : bhel.com








