ರಪೇಲ್ ಒಪ್ಪಂದ: ಹೊಸ ತನಿಖೆಗೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ…
36 ರಫೇಲ್ ಜೆಟ್ ಯುದ್ಧ ವಿಮಾನಗಳ ಖರೀದಿಗಾಗಿ ಭಾರತ ಮತ್ತು ಫ್ರಾನ್ಸ್ ನಡುವಿನ ಒಪ್ಪಂದದ ಬಗ್ಗೆ ಹೊಸದಾಗಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಮತ್ತು ಎಸ್.ರವೀಂದ್ರ ಭಟ್ ಅವರನ್ನೊಳಗೊಂಡ ನ್ಯಾಯಪೀಠ ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದ ಹೊಸ ಸಾಕ್ಷ್ಯಗಳನ್ನ ಸಂಗ್ರಹಿಸಲು ರೊಗೇಟರಿ ಪತ್ರಗಳನ್ನು ನೀಡಲು ನಿರ್ದೇಶನವನ್ನು ನೀಡುವಂತೆ ವಕೀಲ ಎಂಎಲ್ ಶರ್ಮಾ ಸಲ್ಲಿಸಿದ ಅರ್ಜಿಯನ್ನ ಪರಿಗಣಿಸಿದೆ.
ಒಪ್ಪಂದವನ್ನು ತನ್ನ ಪರವಾಗಿ ಪಡೆಯಲು ಮಧ್ಯವರ್ತಿಯೊಬ್ಬರಿಗೆ ಡಸಾಲ್ಟ್ ಏವಿಯೇಷನ್‌ನಿಂದ ಒಂದು ಶತಕೋಟಿ ಯುರೋಗಳನ್ನು ಪಾವತಿಸಲಾಗಿದೆ ಎಂಬ ಕೆಲವು ಮಾಧ್ಯಮಗಳ ವರದಿಗಳನ್ನು ಉಲ್ಲೇಖಿಸಿದ್ದಾರೆ. ಹೊಸ ಪಿಐಎಲ್ ಅನ್ನು ಪರಿಗಣಿಸಲು ಪೀಠ ನಿರಾಕರಿಸಿದ ನಂತರ ಶರ್ಮಾ ಪಿಐಎಲ್ ಹಿಂಪಡೆದಿದ್ದಾರೆ.
ಡಿಸೆಂಬರ್ 14, 2018 ರಂದು, 36 ರಫೇಲ್ ಜೆಟ್‌ಗಳ ಖರೀದಿಗಾಗಿ ಭಾರತ ಮತ್ತು ಫ್ರಾನ್ಸ್ ನಡುವಿನ ಒಪ್ಪಂದವನ್ನು ಪ್ರಶ್ನಿಸುವ ಪಿಐಎಲ್‌ಗಳನ್ನ ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು,
ನವೆಂಬರ್ 2019 ರಲ್ಲಿ, ಆಗಿನ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ರಂಜನ್ ಗೊಗೊಯ್ ನೇತೃತ್ವದ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ, ರಫೇಲ್ ಖರೀದಿಯನ್ನು ಎತ್ತಿಹಿಡಿದ ಡಿಸೆಂಬರ್ 14, 2018 ರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸಿತ್ತು.








