ADVERTISEMENT
Saturday, March 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

V. Somanna | ಸಿದ್ದರಾಮಯ್ಯನವರೇ,ವಾಸ್ತವಾಂಶ ತಿಳಿಯದೆ ಮಾತನಾಡಿದ್ದೀರಿ

Mahesh M Dhandu by Mahesh M Dhandu
August 30, 2022
in Newsbeat, State, ಬೆಂಗಳೂರು
Minister V Somanna - Nadaprabhu Kempegowda is a secular leader

Minister V Somanna - Nadaprabhu Kempegowda is a secular leader

Share on FacebookShare on TwitterShare on WhatsappShare on Telegram

V. Somanna | ಸಿದ್ದರಾಮಯ್ಯನವರೇ,ವಾಸ್ತವಾಂಶ ತಿಳಿಯದೆ ಮಾತನಾಡಿದ್ದೀರಿ

ಬೆಂಗಳೂರು : ಸಿದ್ದರಾಮಯ್ಯನವರೇ,ವಾಸ್ತವಾಂಶ ತಿಳಿಯದೆ ಮಾತನಾಡಿದ್ದೀರಿ, ನಿಮ್ಮ ಮಾತುಗಳು ನನಗೆ ಬಹಳಷ್ಟು ಬೇಸರ ತರಿಸಿದೆ ಎಂದು ಸಚಿವ ವಿ.ಸೋಮಣ್ಣ ಅಸಮಾಧಾನ ಹೊರಹಾಕಿದ್ದಾರೆ.

Related posts

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

March 7, 2026
ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

March 7, 2026

ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಅವರು ನಿನ್ನೆ ನನ್ನ ಕ್ಷೇತ್ರಕ್ಕೆ ಬಂದು ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ನಾವು ಒಂದು ಲಕ್ಷ ಮನೆಗಳನ್ನ ಬೆಂಗಳೂರಿಗೆ ಸ್ಯಾಂಕ್ಷನ್ ಮಾಡಿದ್ದೋ. ನಮ್ಮ ಕೃಷ್ಣಪ್ಪ ಹಗರಣ ಇಲ್ಲದೆ ಮಾಡಿದ್ದ, ಇವನ್ಯಾರೋ ಸೋಮಣ್ಣ ಬಂದು ಹಾಳು ಮಾಡಿದ್ದಾನೆ ಅಂತ ಏಕವಚನ ಪದಪ್ರಯೋಗ ಮಾಡಿದ್ದಾರೆ. ನೀವು ಐದು ವರ್ಷ ಮುಖ್ಯಮಂತ್ರಿ ಆಗಿದ್ದವರು ಸಿದ್ದರಾಮಯ್ಯನವರೇ,ವಾಸ್ತವಾಂಶ ತಿಳಿಯದೆ ಮಾತನಾಡಿದ್ದೀರಿ, ನಿಮ್ಮ ಮಾತುಗಳು ನನಗೆ ಬಹಳಷ್ಟು ಬೇಸರ ತರಿಸಿದೆ ಅಸಮಾಧಾನ ವ್ಯಕ್ತಪಡಿಸಿದರು.

ಕೃಷ್ಣಪ್ಪ ಹಾಗೂ ಅವರ ಪುತ್ರ ಪ್ರಿಯಾಕೃಷ್ಣಾ ಪೂರ್ವಾಪರ ಏನು ಅನ್ನೋದು ಎಲ್ಲರಿಗೂ ಗೊತ್ತು.  ಶ್ರೀರಂಗನಾಥಸ್ವಾಮಿ ದೇವಸ್ಥಾನಕ್ಕೆ ಸೇರಿದ ಜಾಗವನ್ನು ಕಬಳಿಸಿದ ಮಾಜಿ ವಸತಿ ಮಂತ್ರಿ ವಿರುದ್ಧ ಕಳೆದ ವಿಧಾನಸಭಾ ಅಧಿವೇಶನದಲ್ಲಿ ವಿಶೇಷ ಕಾರ್ಯಪಡೆ ರಚನೆಗೆ ಆದೇಶವಾಗಿದೆ. ವಿಶೇಷ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿದೆ. ಜಮೀನು ತಮ್ಮ ಹೆಸರಿಗೆ ಬರೆಸಿಕೊಂಡು ಅದನ್ನ ಹಂಚೋ ಕೆಲಸ ಮಾಡಿದ್ರು. ಇವರ ಕಾಲದಲ್ಲಿ ಆದ ಹಗರಣ ಅದು. ನಾನು ಯಾವುದು ಕ್ಯಾನ್ಸಲ್ ಮಾಡಿದ್ದೇನೆ ತೋರಿಸಲಿ, ಒಂದೇ ಒಂದು ಮನೆ ಕೂಡ ಕಟ್ಟಿಲ್ಲ.  ಅವರ ಜೊತೆ ನೀವು ಕೂತು ಮಾತನಾಡೋದು ಎಷ್ಟರ ಮಟ್ಟಿಗೆ ಸರಿ ಅಂತ ಸಚಿವರು ಪ್ರಶ್ನಿಸಿದರು. ‌

minister v somanna slams ex cm siddaramaiah in bangalore saaksha tv
minister v somanna slams ex cm siddaramaiah in bangalore saaksha tv

2017ರಲ್ಲಿ ಬೆಂಗಳೂರು ನಗರದಲ್ಲಿ 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯನ್ನು ಸಿದ್ದರಾಮಯ್ಯನವರ ಸರ್ಕಾರ ಘೋಷಿಸಿತ್ತು. 2018-19ನೇ ಸಾಲಿನಲ್ಲಿ 46,499 ಮನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿ, 28,754 ಮನೆಗಳಿಗೆ ಎಲ್.ಒ‌.ಎ ನೀಡಿದ್ದು, ಗುತ್ತಿಗೆದಾರರೊಂದಿಗೆ ಕರಾರು ಮಾಡಿಕೊಳ್ಳಲಾಗಿತ್ತು. 1070 ಎಕರೆ  ಜಮೀನು ನೀಡಲಾಗಿದೆ ಅಂತಾರೆ ಆದರೆ 1014 ಎಕರೆ ಕಾಗದದಲ್ಲಿ‌ ಮಂಜೂರಾಗಿದ್ದು ಬಿಟ್ಟರೆ ಯಾವುದೇ ಜಮೀನು ವಾಸಕ್ಕೆ ಯೋಗ್ಯವಾಗಿರಲಿಲ್ಲ. ನಮ್ಮ ಸರ್ಕಾರ ಬಂದ ಮೇಲೆ 553 ಎಕರೆ ಜಮೀನನ್ನು ವಶಕ್ಕೆ ಪಡೆದು, 168 ಎಕರೆ ಹೆಚ್ಚುವರಿ ಜಮೀನನ್ನು ಮಂಜೂರು ಮಾಡಲಾಗಿದ್ದು,

493 ಎಕರೆ ಜಮೀನನ್ನು ಗುತ್ತಿಗೆದಾರರಿಗೆ ಹಸ್ತಾಂತರ ಮಾಡಲಾಗಿದ್ದು 48,018 ಮನೆಗಳ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ.‌ 2,000 ಮನೆಗಳು ಪೂರ್ಣಗೊಂಡಿದ್ದು ಸೆಪ್ಟೆಂಬರ್ 7 ರಂದು ಸಾಂಕೇತಿಕವಾಗಿ ಹಸ್ತಾಂತರ ಮಾಡಲಿದ್ದೇವೆ. ಇವರು ಕೊಟ್ಟಿದ್ದು ಸೇರಿ ನಾವು ಹಣ ಬಿಡುಗಡೆ ಮಾಡಿ ಕಟ್ಟಡಗಳನ್ನು ನಿರ್ಮಾಣ ಮಾಡಿ ಮನೆಗಳನ್ನ ಪಾರದರ್ಶಕವಾಗಿ ಮಾಡಿದ್ದೇವೆ. ಈಗಾಗಲೇ 44,510 ಅರ್ಜಿಗಳನ್ನು ಸ್ವೀಕರಿಸಿದ್ದು 6,499 ಅರ್ಜಿದಾರರು ತಾವು ಬಯಸಿದ ಮನೆಯನ್ನು ಆಯ್ಕೆ ಮಾಡಿಕೊಂಡಿರುತ್ತಾರೆ.

Tags: #Saaksha TVkrishnappaSiddaramaiahv somanna
ShareTweetSendShare
Join us on:

Related Posts

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

by Shwetha
March 7, 2026
0

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿದೇಶಾಂಗ ನೀತಿ ಎಂಬುದು ಒಬ್ಬ ವ್ಯಕ್ತಿಯ ನಿರ್ಧಾರದಿಂದ...

ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

by Shwetha
March 7, 2026
0

ಅಮೆರಿಕಾ ಮತ್ತು ಇಸ್ರೇಲ್ ವಿರುದ್ಧ ಹೋರಾಡುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ ಎಂದು ಇರಾನ್ ಉಪ ವಿದೇಶಾಂಗ ಸಚಿವ ಸಯೀದ್‌ ಖತಿಬ್‌ಜಾದೆ ಹೇಳಿದ್ದಾರೆ. ನಡೆಯುತ್ತಿರುವ ಸಂಘರ್ಷದ ನಡುವೆ...

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

by Shwetha
March 7, 2026
0

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನ ಅತ್ಯಂತ ಮಹತ್ವದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಮತ್ತೊಮ್ಮೆ...

ಬಜೆಟ್ ಬೆನ್ನಲ್ಲೇ ಸಿದ್ದರಾಮಯ್ಯಗೆ ಟೆನ್ಷನ್ : ಮುಂದಿನ ವರ್ಷದ ಬಜೆಟ್ ಡಿಕೆ ಶಿವಕುಮಾರ್ ಮಂಡನೆ ಸಚಿನ್ ಮೀಗಾ ಪೋಸ್ಟ್ ವೈರಲ್

ಬಜೆಟ್ ಬೆನ್ನಲ್ಲೇ ಸಿದ್ದರಾಮಯ್ಯಗೆ ಟೆನ್ಷನ್ : ಮುಂದಿನ ವರ್ಷದ ಬಜೆಟ್ ಡಿಕೆ ಶಿವಕುಮಾರ್ ಮಂಡನೆ ಸಚಿನ್ ಮೀಗಾ ಪೋಸ್ಟ್ ವೈರಲ್

by Shwetha
March 7, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಯ ಬಿರುಗಾಳಿ ಎದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿದ ಬೆನ್ನಲ್ಲೇ, ಆಡಳಿತಾರೂಢ ಕಾಂಗ್ರೆಸ್...

ಕರ್ನಾಟಕ ಬಜೆಟ್ 2026: 4.48 ಲಕ್ಷ ಕೋಟಿಯ ಐತಿಹಾಸಿಕ ಬಜೆಟ್ ಮಂಡನೆ,ಗ್ಯಾರಂಟಿ ಯೋಜನೆಗಳಿಗಿಲ್ಲ ಬ್ರೇಕ್ ;ಯಾವ ಇಲಾಖೆಗೆ ಒಲಿಯಿತು ಬಂಪರ್?

ಕರ್ನಾಟಕ ಬಜೆಟ್ 2026: 4.48 ಲಕ್ಷ ಕೋಟಿಯ ಐತಿಹಾಸಿಕ ಬಜೆಟ್ ಮಂಡನೆ,ಗ್ಯಾರಂಟಿ ಯೋಜನೆಗಳಿಗಿಲ್ಲ ಬ್ರೇಕ್ ;ಯಾವ ಇಲಾಖೆಗೆ ಒಲಿಯಿತು ಬಂಪರ್?

by Shwetha
March 7, 2026
0

ರಾಜ್ಯ ಸರ್ಕಾರದ 2026-27ನೇ ಸಾಲಿನ ಬಜೆಟ್ ಮಂಡನೆಯಾಗಿದ್ದು, ಒಟ್ಟು 4.48 ಲಕ್ಷ ಕೋಟಿ ರೂಪಾಯಿಗಳ ಬೃಹತ್ ಗಾತ್ರದ ಆಯವ್ಯಯ ಇದಾಗಿದೆ. ಪ್ರಸಕ್ತ ಸಾಲಿನ ಬಜೆಟ್, ಸರ್ಕಾರದ ಬಹುಮಹತ್ವಾಕಾಂಕ್ಷೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram