Chikkaballapur | ಲಾರಿ ಉರುಳಿ ಬಿದ್ದು ಕ್ಲೀನರ್ ಸಾವು
ಚಿಕ್ಕಬಳ್ಳಾಪುರ : ರೈಲ್ವೆ ಅಂಡರ್ ಪಾಸ್ ಗೆ ಡಿಕ್ಕಿ ಹೊಡೆದು ಲಾರಿ ಉರುಳಿ ಬಿದ್ದು ಓರ್ವ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಜಾತವಾರಹೊಸಹಳ್ಳಿ ಗೇಟ್ ಬಳಿ ನಡೆದಿದೆ.
ಅವೈಜ್ಞಾನಿಕವಾಗಿ ರೈಲ್ವೆ ಅಂಡರ್ ಪಾಸ್ ನಿರ್ಮಾಣ ಮಾಡಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಘಟನೆಯಲ್ಲಿ ಲಾರಿಯಲ್ಲಿದ್ದ ಕ್ಲೀನರ್ ಮೃತಪಟ್ಟಿದ್ದು, ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ನೀಡಿದ್ದಾರೆ.
ಗಾಯಾಳುವನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.








