ಬೆಂಗಳೂರು, ಜೂನ್ 4: ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿಯೊಂದನ್ನು ನೀಡಿದೆ. ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಯು ಜೂನ್ 18 ರಂದು ನಡೆಯಲಿದ್ದು, ಇದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಮತ್ತು ಅವರ ಪರೀಕ್ಷಾ ಕೇಂದ್ರದ ವಿವರವುಳ್ಳ ತಾತ್ಕಾಲಿಕ ಪಟ್ಟಿ ಬಿಡುಗಡೆಯಾಗಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳಿಗೆ ತಾವು ಇರುವ ಜಿಲ್ಲೆಯಲ್ಲೇ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ್ದು, ಇದೀಗ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿದೆ.
ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಗೆ ಸಂಬಂಧಿಸಿದಂತೆ ತಿದ್ದುಪಡಿಗೆ ಕಾಲೇಜುಗಳ ಪ್ರಾಚಾರ್ಯರ ಮೂಲಕ ಜೂನ್ 5 ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ಜೂನ್ 7 ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುತ್ತದೆ.
ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು www.pue.kar.nic.in ವೆಬ್ ಸೈಟ್ ನಲ್ಲಿ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಂಡು ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಹೋಗಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯು ತಿಳಿಸಿದೆ.
ನೀಟ್ ಪ್ರತಿಭಟನೆಯಲ್ಲಿ ಉಚಿತ ಊಟ ಹಂಚಿದವನ ಅಸಲಿ ಜಾತಕ ಬಯಲು: 20 ಸಾವಿರ ಸಂಬಳದವನಿಗೆ ದಿನಕ್ಕೆ 10 ಲಕ್ಷ ಖರ್ಚು ಮಾಡಲು ಹಣ ಎಲ್ಲಿಂದ ಬಂತು?
ನೀಟ್ ಪರೀಕ್ಷಾ ಅಕ್ರಮದ ಹೆಸರಿನಲ್ಲಿ ನಡೆದ ಪ್ರತಿಭಟನೆಗಳ ಹಿಂದೆ ದೊಡ್ಡ ಮಟ್ಟದ ವ್ಯವಸ್ಥಿತ ಪಿತೂರಿ ನಡೆದಿದೆಯೇ ಎಂಬ ಬಲವಾದ ಸಂಶಯ ಈಗ ವ್ಯಕ್ತವಾಗುತ್ತಿದೆ. ಈ ಪ್ರತಿಭಟನೆಯಲ್ಲಿ ಸತತ...








