Muragha Shree case | ಮುರುಘಾ ಶ್ರಿಗಳಿಗೆ ಎದೆನೋವು – ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್
ಮುರುಘಾ ಶ್ರಿಗಳಿಗೆ ಎದೆನೋವು
ಜೈಲಿನಿಂದ ಆಸ್ಪತ್ರೆಗೆ ಶ್ರೀಗಳು ಶಿಫ್ಟ್
ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ
ಮುರುಘಾ ಶ್ರೀಗಳಿಗೆ ಇಸಿಜಿ ತಪಾಸಣೆ
ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.
ಸದ್ಯ ಮುರುಘಾ ಶ್ರೀಗಳಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವರಿಗೆ ಇಸಿಜಿ ತಪಾಸಣೆ ಮಾಡಲಾಗುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ.
ಆಗಸ್ಟ್ 26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಮುರುಘಾ ಶರಣದ ವಿರುದ್ಧ ಪ್ರಕರಣ ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಸಂಬಂಧ ಮುರುಘಾ ಶ್ರೀಗಳನ್ನು ಪೊಲೀಸರು ಬಂಧಿಸಿದ್ರು.

ನಂತರ ಅವರನ್ನ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು. ಬಳಿಕ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಕೋಮಲಾ ಅವರ ಮುಂದೆ ಹಾಜರುಪಡಿಸಿದ್ರು.
ಈ ವೇಳೆ ಶರಣರ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಧೀಶರು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಜೈಲಿಗೆ ಸ್ಥಳಾಂತರ ಮಾಡಿದ ಬಳಿಕ ಶ್ರೀಗಳು ಸಂಪೂರ್ಣವಾಗಿ ಮೌನಕ್ಕೆ ಜಾರಿದ್ದರಂತೆ. ಯಾರೊಂದಿಗೂ ಮಾತನಾಡದೇ ಬೆಳಿಗ್ಗೆ ಒಂದು ಲೋಟ ಹಾಲನ್ನು ಸ್ವೀಕರಿಸಿದ್ದರಂತೆ.








