pm narendra modi | ಮಂಗಳೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ !
ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಡಲ ನಗರಿ ಮಂಗಳೂರಿಗೆ ಭೇಟಿ ನೀಡಲಿದ್ದಾರೆ.
ಅವರು ಕೊಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಇಂದು ಮಧ್ಯಾಹ್ನ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ವೇಳೆ ಪ್ರಧಾನಿಗಳು ಎನ್ಎಂಪಿಎ ಮತ್ತು ಎಮ್ಆರ್ಪಿಎಲ್ಗೆ ಸೇರಿದ 3,800 ಕೋಟಿ ರೂ. ಮೊತ್ತದ ಎಂಟು ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ ನೆರವೇರಿಸುವರು.
ಪ್ರಧಾನಿ ಲೋಕಾರ್ಪಣೆ ಮಾಡುವ ಯೋಜನೆಗಳು ಹೀಗಿವೆ
ಕಂಟೇನರ್ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14ರ ಯಾಂತ್ರೀಕರಣ (ರೂ.281 ಕೋಟಿ)
ಬಿಎಸ್ VI ಉನ್ನತೀಕರಣ ಯೋಜನೆ (ರೂ.1829 ಕೋಟಿ), ಸಮುದ್ರ ನೀರಿನ ನಿರ್ಲವಣೀಕರಣ ಘಟಕ (ರೂ.677 ಕೋಟಿ)

ಶಿಲಾನ್ಯಾಸ ಮಾಡುವ ಯೋಜನೆಗಳು ಹೀಗಿವೆ
ಎನ್ಎಂಪಿಟಿಯಲ್ಲಿ ಸಮಗ್ರ ಎಲ್ಪಿಜಿ ಹಾಗೂ ಬೃಹತ್ ಪಿಓಎಲ್ ಸೌಲಭ್ಯ (ಅಂದಾಜು ವೆಚ್ಚ ರೂ.500 ಕೋಟಿ)
ಶೇಖರಣಾ ಟ್ಯಾಂಕ್ಗಳು ಹಾಗೂ ಖಾದ್ಯ ತೈಲ ಸಂಸ್ಕರಣಾಗಾರ ನಿರ್ಮಾಣ (ರೂ.100 ಕೋಟಿ)
ಬಿಟುಮಿನ್ ಶೇಖರಣಾ ಟ್ಯಾಂಕ್ ಘಟಕಗಳ ನಿರ್ಮಾಣ (ರೂ.100 ಕೋಟಿ)
ಬಿಟುಮಿನ್, ಖಾದ್ಯ ತೈಲ ಶೇಖರಣಾ ಟ್ಯಾಂಕ್ಗಳು ಹಾಗೂ ಸಂಬಂಧಿತ ಸೌಲಭ್ಯಗಳ ನಿರ್ಮಾಣ (ರೂ.100ಕೋಟಿ).
ಇವುಗಳ ಜೊತೆಗೆ ಪ್ರಧಾನಿ ಕುಳಾಯಿಯಲ್ಲಿ ಇಪಿಸಿ ಮಾದರಿಯಲ್ಲಿ ಮೀನುಗಾರಿಕಾ ಬಂದರು ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆಯನ್ನು ಮಾಡಲಿದ್ದಾರೆ.
ಇನ್ನು ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಸರ್ಬಾನಂದ್ ಸೋನೊವಾಲ್, ಹರ್ದೀಪ್ ಸಿಂಗ್ ಪುರಿ, ಬಂದರು, ಹಡಗು ಮತ್ತು ಜಲಸಾರಿಗೆ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್ ಹಾಗೂ ಶಂತನು ಠಾಕೂರ್ ಭಾಗವಹಿಸಲಿದ್ದಾರೆ.








