ಸ್ಯಾಂಡಲ್ ವುಡ್ ಗೂ ಕಾಲಿಟ್ಟ boycott ಟ್ರೆಂಡ್…
ಬಾಲಿವುಡ್ ನಲ್ಲಿ ಸಾಕಷ್ಟು ಸದ್ದು ಮಾಡಿದ್ದ ಬಾಯ್ ಕಟ್ ಟ್ರೆಂಡ್ ಇದೀಗ ಸ್ಯಾಂಡಲ್ ವುಡ್ ಗೂ ಕಾಲಿಟ್ಟಿದೆ. ಚಾಮರಾಸಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ಅಭಿನಯದ ಬನಾರಸ್ ಚಿತ್ರವನ್ನ boycott ಮಾಡಿ ಎಂದು ಟ್ವೀಟ್ ಮಾಡಲಾಗುತ್ತಿದೆ.
ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರದಲ್ಲಿ ವಿರೋಧ ವ್ಯಕ್ತಪಡಿಸಿದ್ದ ಶಾಸಕ ಜಮೀರ್ ಅಹ್ಮದ್ ಖಾನ್ ಪುತ್ರ ಚಿತ್ರರಂಗ ಪ್ರವೇಶ ಮಾಡುತ್ತಿದ್ದು, ಪುತ್ರ ಝೈದ್ ಖಾನ್ ಅವರ ಬನಾರಸ್ ಚಿತ್ರಕ್ಕೆ ಇದೀಗ ವಿರೋಧ ವ್ಯಕ್ತವಾಗುತ್ತಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಗಣೇಶ ಹಬ್ಬಕ್ಕೆ ಶುಭ ಕೋರುವ ಶಾಸಕರು, ಅತ್ತ ದೆಹಲಿಯಲ್ಲಿ ಖ್ಯಾತ ವಕೀಲ ಕಪಿಲ್ ಸಿಬಲ್ ರನ್ನು ಭೇಟಿ ಮಾಡಿ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ನಡೆಸದಂತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಾಕಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಅಷ್ಟೇ ಅಲ್ಲದೇ ಇತ್ತೀಚೆಗೆ ಬನಾರಸ್ ಚಿತ್ರತಂಡ ಬಿಡುಗಡೆ ಮಾಡಿದ್ದ ಪೋಸ್ಟರ್ ಮತ್ತು ಚಿತ್ರಗಳಲ್ಲೂ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಲಾಗಿದೆ.
ಅಮೀರ್ ಖಾನ್ ಅಭಿನಯದ ಲಾಲ್ ಸಿಂಗ್ ಛಡ್ಡಾದಿಂದ ಬಾಯ್ ಕಟ್ ಟ್ರೆಂಡ ಬಾಲಿವುಡ್ ನಲ್ಲಿ ವ್ಯಾಪಕವಾಗಿ ಬೆಳೆದಿತ್ತು. ಅಕ್ಷಯ್ ಕುಮಾರ್ ಅಭಿನಯದ ರಕ್ಷಾ ಬಂಧನ್ ಸಿನಿಮಾಗೂ ಇದರ ಬಿಸಿ ತಟ್ಟಿತ್ತು. ಇತ್ತೀಚಿಗೆ ರಣ್ ಬೀರ್ ಕಪೂರ್ ಅಭಿನಯದ ಬ್ರಹ್ಮಾಸ್ತ್ರ ಚಿತ್ರದ ಮೇಲೂ ಬಾಯ್ ಕಟ್ ಟ್ರೆಂಡ್ ನಡೆಯುತ್ತಿದೆ.