Bangalore | ಸಿಲಿಂಡರ್ ಸ್ಫೋಟ – ಮೂವರಿಗೆ ಗಾಯ
ಬೆಂಗಳೂರು : ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಕೆಎಸ್ ಲೇಔಟ್ ಠಾಣಾ ವ್ಯಾಪ್ತಿಯ ಯಲಚೇನಹಳ್ಳಿ ಬಳಿ ನಡೆದಿದೆ.
ಘಟನೆಯಲ್ಲಿ ಓರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ವಿಕ್ಟೋರಿಯಾ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಕೆಎಸ್ ಲೇಔಟ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಿಲಿಂಡರ್ ಸ್ಫೋಟದಿಂದ ಬಿಹಾರ ಮೂಲದ ಗೌತಮ್ ,ಮಂಡಿಲ್, ಮಹಿಳೆ ಸೋನಿ ಎಂಬುವರಿಗೆ ಗಾಯಗಳಾಗಿವೆ.
ಈ ಇಬ್ಬರು ಸೆಕ್ಯೂರಿಟಿ ಕೆಲಸ ಮಾಡ್ತಿದ್ದು, ಬಾಡಿಗೆ ಮನೆಯಲ್ಲಿ ವಾಸವಿದ್ದರು.
ರಾತ್ರಿ ವೆಂಟಿಲೇಟರ್ ಸಮಸ್ಯೆಯಿಂದ ಗ್ಯಾಸ್ ಸೋರಿಕೆ ಆಗಿದ್ದು,ಬೆಳಗ್ಗೆ ಲೈಟ್ ಆನ್ ಮಾಡುತ್ತಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿದೆ.








