ಬೆಂಗಳೂರು : ಕೊರೊನಾ ಹೊಡೆತಕ್ಕೆ ಲಾಕ್ ಡೌನ್ ಆಗಿತ್ತು. ಲಾಕ್ ಡೌನ್ ಸಡಿಲಗೊಂಡ ಬಳಿಕ ರಾಜ್ಯ ಸರ್ಕಾರ ಕೆಲ ಇಲಾಖೆಗಳಲ್ಲಿ ಬದಲಾವಣೆ ತರುತ್ತಿದೆ. ಒಂದೆಡೆ ಕೊರೊನಾ ನಿಯಂತ್ರಣ ಮಾಡಲು ಜಿಲ್ಲಾಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಮತ್ತೊಂದೆಡೆ ಈ ಸಮಯದಲ್ಲಿ ರಾಜ್ಯ ಸರ್ಕಾರ ಅಧಿಕಾರಗಳ ವರ್ಗಾವಣೆಗೆ ಮುಂದಾಗಿದೆ. 2019 ರಿಂದ ಬಿಡಿಎ ಆಯುಕ್ತರಾಗಿ ಸೇವೆ ಸಲ್ಲಿಸಿದ ಡಾ.ಜಿ.ಸಿ.ಪ್ರಕಾಶ್ ಅವರನ್ನು ಮೈಸೂರು ಪ್ರಾದೇಶಿಕ ಆಯುಕ್ತರಾಗಿ ನೇಮಿಸಿ ವರ್ಗಾವಣೆ ಮಾಡಲಾಗಿದೆ. ಆಯುಕ್ತ ಡಾ.ಜಿ.ಸಿ ಪ್ರಾಕಾಶ್ 2006 ಬ್ಯಾಚ್ ನ ಐಏಎಸ್ ಅಧಿಕಾರಿಯಾಗಿದ್ದಾರೆ. ಇವರನ್ನು ಇಂದು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜೊತೆಗೆ ಮೈಸೂರು ಜಿಲ್ಲೆಯ ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮೇಲುಸ್ತುವರಿ ವಿಶೇಷ ಅಧಿಕಾರಿಯಾಗಿ ನಿಯೋಜನೆ ಮಾಡಲಾಗಿದೆ. ಇವರ ಸ್ಥಾನಕ್ಕೆ ಬೀದರ್ ಜಿಲ್ಲಾಧಿಕಾರಿಯಾಗಿದ್ದ ಡಾ.ಹೆಚ್.ಆರ್ ಮಹಾದೇವ್ ನಿಯೋಜನೆ ಮಾಡಲಾಗಿದೆ.
ಬೀದರ್ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ, ರಾಷ್ಟ್ರೀಯ ಆರೋಗ್ಯ ಯೋಜನೆ ಮತ್ತು ಆರೋಗ್ಯ ನಿರ್ದೇಶನಾಲಯ ನಿರ್ದೇಶಕರಾಗಿದ್ದ ರಾಮಚಂದ್ರನ್ ಆರ್ ವರ್ಗಾವಣೆ ಆಗಿದ್ದಾರೆ. ರಾಷ್ಟ್ರೀಯ ನಗರ ಜೀವನೋಪಾಯ ಯೋಜನೆಯ ಯೋಜನಾ ನಿರ್ದೇಶಕಿಯಾಗಿದ್ದ ಡಾ. ಅರುಂಧತಿ ಚಂದ್ರಶೇಖರ್ ಅವರನ್ನು ರಾಷ್ಟ್ರೀಯ ಆರೋಗ್ಯ ಯೋಜನೆ ಮತ್ತು ಆರೋಗ್ಯ ನಿರ್ದೇಶನಾಲಯ ನಿರ್ದೇಶಕಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್
ಬೆಂಗಳೂರು: ರಾಜಕಾರಣದಲ್ಲಿ ಕೆಲಸ ಆಗಬೇಕೆಂದರೆ ಸಾಮ, ದಾನ, ಭೇದ, ದಂಡ ಎಲ್ಲವನ್ನೂ ಬಳಸಬೇಕು ಎಂಬ ಮಾತಿದೆ. ಆದರೆ, ಹಾಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...








