ಬೆಂಗಳೂರು : ರೈತರು ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಮತ್ತು ರಾಜ್ಯ ಸರ್ಕಾರ ರೈತರಿಗೆ ಸಿಗುವ ನೆರವುಗಳು ಪಡೆಯಬೇಕಾದರೆ ತಮ್ಮ ಬ್ಯಾಂಕ್ ಖಾತೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ರೈತರಲ್ಲಿ ಮನವಿ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ಸಚಿವ ಬಿ.ಸಿ ಪಾಟೀಲ್, ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಪಶಲ್ ಭೀಮಾ ಯೋಜನೆ ಮತ್ತು ರಾಜ್ಯ ಸರ್ಕಾರ ರೈತರಿಗೆ ನೆರವು ಬೇಗ ಸಿಗಬೇಕಾದರೆ, ರೈತರು ತಮ್ಮ ಬ್ಯಾಂಕ್ ಖಾತೆಗೆ ಆಧಾರ ಸಂಖ್ಯೆ ಜೋಡಣೆ ಮಾಡಬೇಕು. ಆದ್ದರಿಂದ ರೈತರು ಈ ಕೆಲಸವನ್ನು ಬೇಗ ಮಾಡಬೇಕು. ಜೊತೆಗೆ ಮೆಕ್ಕೆಜೋಳ ಹಾಗೂ ಹೂವು ಬೆಳೆದ ರೈತರಿಗೆ ಮುಖ್ಯಮಂತ್ರಿಯವರು ಹತ್ತು ಲಕ್ಷ ರೈತರಿಗೆ ತಲಾ ಐದು ಸಾವಿರದಂತೆ ಪರಿಹಾರ ಧನದ ಮೊದಲ ಕಂತು ಬಿಡುಗಡೆ ಮಾಡಿದ್ದಾರೆ. ಈ ಯೋಜನೆಗೂ ಆನ್ ಲೈನ್ ಮೂಲಕ ಪರಿಹಾರ ಯೋಜನೆಗೆ ಚಾಲನೆ ನೀಡಲಾಗಿದೆ.
ಈಗಾಗಲೇ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿದ ರೈತರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯ ಸಿಕ್ಕಿದೆ. ಆದ್ದರಿಂದ ಯಾರು ತಮ್ಮ ಖಾತೆಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿಲ್ಲವೂ, ಅಂತವರು ಆದ್ದಷ್ಟು ಬೇಗ ಆಧಾರ್ ನಂಬರ್ ಖಾತೆಗೆ ಜೋಡಣೆ ಮಾಡಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ರೈತರಲ್ಲಿ ಮನವಿ ಮಾಡಿದ್ದಾರೆ.








