ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯ ಸರ್ಕಾರದಿಂದ ಎಸ್ಸಿ, ಎಸ್ಟಿ ವರ್ಗದ ಜನರಿಗೆ ಹೊಸ ಕೊಡುಗೆ

Mahesh M Dhandu by Mahesh M Dhandu
September 8, 2022
in Newsbeat, State, ರಾಜ್ಯ
new-offer-for-sc-st-category-people-from-state-government

new-offer-for-sc-st-category-people-from-state-government

Share on FacebookShare on TwitterShare on WhatsappShare on Telegram

ರಾಜ್ಯ ಸರ್ಕಾರದಿಂದ ಎಸ್ಸಿ, ಎಸ್ಟಿ ವರ್ಗದ ಜನರಿಗೆ ಹೊಸ ಕೊಡುಗೆ

ಬೆಂಗಳೂರು : ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ವಿರಳ ಕಾಯಿಲೆಗಳಿಗೂ ಚಿಕಿತ್ಸಾ ವೆಚ್ಚ ಭರಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಕ್ರಮ ವಹಿಸಿದ್ದಾರೆ.

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

May 4, 2026

ಹಾಗೆಯೇ, ಹೆಚ್ಚು ಚಿಕಿತ್ಸಾ ವೆಚ್ಚ ತಗುಲುವ ಕಾಯಿಲೆಗಳಿಗೂ ಉಚಿತ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗಿದೆ. ಈ ಮೂಲಕ ಬಡ ಜನರ ಆರೋಗ್ಯ ರಕ್ಷಣೆಗೆ ಹೊಸ ಕೊಡುಗೆಯನ್ನು ರಾಜ್ಯ ಸರ್ಕಾರ ನೀಡಿದೆ.

ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ, ವಿವಿಧ ಕಾಯಿಲೆಗಳಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಿಂದ ಚಿಕಿತ್ಸಾ ವೆಚ್ಚ ಭರಿಸಲಾಗುತ್ತಿದೆ. ಆದರೆ ಕೆಲ ವಿರಳ ಕಾಯಿಲೆಗಳನ್ನು ಈ ಯೋಜನೆಯಡಿ ಸೇರಿಸಲಾಗಿಲ್ಲ. ಅಲ್ಲದೆ ಇಂತಹ ರೋಗಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ಇರುವುದಿಲ್ಲ.

ಅಂತಹ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿ ಆ ವೆಚ್ಚವನ್ನು ಭರಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ, ಚಿಕಿತ್ಸೆಗಳು ಹಾಗೂ ವೆಚ್ಚದ ಪಟ್ಟಿಯನ್ನು ಸಿದ್ಧಪಡಿಸಿದ್ದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌, ಈ ಕುರಿತು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.

ಈ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿ ಆದೇಶ ಹೊರಡಿಸಿದೆ. ಇದರ ಜೊತೆಗೆ, ಹೆಚ್ಚು ವೆಚ್ಚ ತಗುಲುವ ಕಾಯಿಲೆಗಳ ಚಿಕಿತ್ಸಾ ವಿಧಾನ ಗುರುತಿಸಿ, ಅವುಗಳಿಗೂ ವೆಚ್ಚ ನಿಗದಿ ಮಾಡಲು ಕ್ರಮ ವಹಿಸಲಾಗಿದೆ.

Dr. K. Sudhakar press meet in gauribidanur saaksha tv
Dr. K. Sudhakar press meet in gauribidanur saaksha tv

ಇದಕ್ಕಾಗಿ ಗಿರಿಜನ ಉಪಯೋಜನೆಯಡಿ 7.39 ಕೋಟಿ ರೂ., ಪರಿಶಿಷ್ಟ ಜಾತಿ ಉಪಯೋಜನೆಯಡಿ 15.79 ಕೋಟಿ ಸೇರಿ, ಒಟ್ಟು 23.18 ಕೋಟಿ ರೂ. ಮೊತ್ತವನ್ನು ಪುನರ್‌ ವಿನಿಯೋಗದ ಮೂಲಕ ಬಿಡುಗಡೆ ಮಾಡಿ ಆದೇಶಿಸಲಾಗಿದೆ. ಪಿಇಟಿ ಸ್ಕ್ಯಾನ್‌ಗೆ 10,000 ರೂ., ಅಸ್ತಿ ಮಜ್ಜೆ ಕಸಿಗೆ ಎರಡು ವಿಧಾನಗಳಲ್ಲಿ 7 ಲಕ್ಷ ರೂ. ಹಾಗೂ 21 ಲಕ್ಷ ರೂ., ರೋಬೋಟಿಕ್‌ ಸರ್ಜರಿಗೆ 1.50 ಲಕ್ಷ ರೂ. ಸೇರಿದಂತೆ ವಿವಿಧ ಚಿಕಿತ್ಸೆಗಳಿಗೆ ವೆಚ್ಚ ನಿಗದಿ ಮಾಡಲಾಗಿದೆ.

ಈ ಕುರಿತು ಮಾತನಾಡಿದ ಸಚಿವ ಡಾ.ಕೆ.ಸುಧಾಕರ್‌, “ಪ್ರಧಾನಿ ನರೇಂದ್ರ ಮೋದಿಯವರು ಜನರ ಬಡ ಜನರ ಆರೋಗ್ಯ ರಕ್ಷಣೆಗಾಗಿ ಜಾರಿ ಮಾಡಿದ ಆಯುಷ್ಮಾನ್‌ ಯೋಜನೆಯನ್ನು ವಿಸ್ತರಿಸುವ ಕೆಲಸವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ರಾಜ್ಯ ಸರ್ಕಾರ ಮಾಡುತ್ತಿದೆ. ವಿರಳ ಕಾಯಿಲೆಗಳಿಗೂ ಚಿಕಿತ್ಸಾ ವೆಚ್ಚವನ್ನು ಭರಿಸುವ ಮಹತ್ವದ ಕ್ರಮವನ್ನು ಸರ್ಕಾರ ಕೈಗೊಂಡಿದೆ. ಜೊತೆಗೆ, ಹೆಚ್ಚು ವೆಚ್ಚ ತಗುಲುವ ಚಿಕಿತ್ಸೆಗಳಿಗೂ ದರ ನಿಗದಿ ಮಾಡಿ, ಆ ವೆಚ್ಚ ಭರಿಸುವ ಕ್ರಮ ವಹಿಸಲಾಗುತ್ತಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಇದರಿಂದ ಬಹಳಷ್ಟು ಪ್ರಯೋಜನವಾಗಲಿದೆʼʼ ಎಂದು ತಿಳಿಸಿದ್ದಾರೆ.

Tags: #Saaksha TVGovernmentSC-ST
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

by Shwetha
May 4, 2026
0

ಮುಂಬೈ: ಭಾರತದ ಮೇಲೆ ನಡೆದ ಸರಣಿ ವಿದೇಶಿ ಆಕ್ರಮಣಗಳು ಮತ್ತು ನೂರಾರು ವರ್ಷಗಳ ಸಂಕಷ್ಟದ ಕಾಲದಲ್ಲೂ ದೇಶದ ಮೂಲ ಗುರುತು ಹಾಗೂ ಸಾಂಸ್ಕೃತಿಕ ಆತ್ಮವನ್ನು ಸಂರಕ್ಷಿಸಿರುವುದು ಆದಿವಾಸಿ...

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

by Shwetha
May 4, 2026
0

ಕುಸ್ತಿ ಲೋಕದಲ್ಲಿ ಮತ್ತು ದೇಶದ ಕ್ರೀಡಾ ವಲಯದಲ್ಲಿ ಬೆಚ್ಚಿಬೀಳಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಖ್ಯಾತ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮಗೆ ಎದುರಾದ ಕಹಿ ಘಟನೆಯನ್ನು ಸಾರ್ವಜನಿಕವಾಗಿ...

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

by Shwetha
May 4, 2026
0

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಆಸ್ತಿ ದಾಖಲೆಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಂಕಷ್ಟ ತಪ್ಪಲಿದ್ದು, ನೇರವಾಗಿ...

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram