Mangalore: ಕರಾವಳಿ ಭಾಗದಲ್ಲಿ ಇಂದಿನಿಂದ ಐದು ದಿನ ಕಾಲ ಭಾರಿ ಮಳೆ
ಕರಾವಳಿ ಭಾಗದಲ್ಲಿ ಮುಂಗಾರು ಚುರುಕು ಪಡೆದುಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದೆ.
ಕೆಲವು ಭಾಗಗಳಲ್ಲಿ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ನಿರ್ಮಾಣವಾಗಿದೆ.
ಮತ್ತೊಂದು ಕಡೆ ಮುಂದಿನ ಮೂರು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಇತ್ತ ಉಡುಪಿ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಸೆಪ್ಟಂಬರ್ 10 ರಿಂದ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಂದಹಾಗೆ ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ನಾನಾ ಅವಾಂತರಗಳು ಸೃಷ್ಠಿಯಾಗಿವೆ.
ಕುಂದಾಪುರ, ಕಾರ್ಕಳ, ಕಾಪು, ಉಡುಪಿ, ಬೈಂದೂರು ಸುತ್ತಮುತ್ತ ಕೆಲವೆಡೆ ರಾತ್ರಿ ವೇಳೆ ಹೆಚ್ಚು ಮಳೆಯಾಗುತ್ತಿದೆ.








