Heavy Rain | ಕಲಬುರಗಿ ಜಿಲ್ಲೆಯಲ್ಲಿ ಪ್ರವಾಹದ ಭೀತಿ
ಕಲಬುರಗಿ : ಮಹಾರಾಷ್ಟ್ರದಲ್ಲಿ ಭಾರಿ ಮಳೆಗೆ ಹೆಚ್ಚಾಗುತ್ತಿದೆ.
ಇದರಿಂದ ಭೀಮಾನದಿಯಲ್ಲಿ ಪ್ರವಾಹ ಹೆಚ್ಚಾಗುತ್ತಿದೆ.
ಮಹಾರಾಷ್ಟ್ರ ಮತ್ತು ಕಲಬುರಗಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಭೀಮಾ ನದಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ.
ಸೊನ್ನ ಬ್ಯಾರೇಝ್ ನಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿರುವುದರಿಂದ ಭೀಮಾನದಿಗೆ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

ಇದರಿಂದ ಕಲಬುರಗಿ ಜಿಲ್ಲೆಯ ಭೀಮಾ ನದಿ ಪಾತ್ರದಲ್ಲಿ ಆತಂಕ ಮನೆ ಮಾಡಿದೆ. ನೀರು ಹೆಚ್ಚಾದ್ರೆ ಹಲವು ಗ್ರಾಮಗಳು ಜಲಾವೃತ ಸಾಧ್ಯತೆಗಳಿವೆ.
ಅಫಜಲಪುರ, ಜೇವರ್ಗಿ, ಚಿತ್ತಾಪುರ ತಾಲೂಕುಗಳಲ್ಲಿ ಆತಂಕ ಮನೆ ಮಾಡಿದೆ. ನದಿ ಸಮೀಪ ಹೋಗದಂತೆ ಜನರಿಗೆ ಅಧಿಕಾರಿಗಳ ಎಚ್ಚರಿಕೆ ನೀಡಿದ್ದಾರೆ.








