Ramanagara: ನಾಪತ್ತೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ..
ನಿನ್ನೆ ಗ್ರಾಮದಿಂದ ನಾಪತ್ತೆಯಾಗಿದ್ದ ಯುವಕ ಇಂದು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ಹಾಸನ ಜಿಲ್ಲೆ, ಹಿರಿಸಾವೆ ಹೋಬಳಿ ಪುರ ಗ್ರಾಮದ 19 ವರ್ಷದ ಯುವಕ ದರ್ಶನ್, ಮಾಗಡಿ ತಾ. ಜಡೇದೇವರ ಮಠದಲ್ಲಿ ಸಂಸ್ಕೃತ ವಿದ್ಯಾರ್ಥಿಯಾಗಿ ಅಭ್ಯಾಸ ನಡೆಸುತಿದ್ದ.
ನಿನ್ನೆಯಿಂದ ಕಾಣಿಯಾಗಿದ್ದಾನೆಂದು ಸಾಮಾಜಿಕ ಜಾಲತಾಣದಲ್ಲಿ ಫೋಟೊ ಹಾಕಲಾಗಿತ್ತು ಇಂದು ಮಠದ ಪಕ್ಕದಲ್ಲೇ ಇರುವ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಶವವನ್ನ ಮೇಲಕ್ಕೆತ್ತಿ ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.








