Bengaluru: ಬೈಕ್ – ಲಾರಿ ಮುಖಾಮುಖಿ ಡಿಕ್ಕಿ – ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮ
ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಯೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಎಳೆದುಕೊಂಡು ಹೋಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಮೆಕ್ರಿ ಸರ್ಕಲ್ ಬಳಿ ಈ ದುರ್ಘಟನೆ ನಡೆದಿದೆ. ಮೃತನನ್ನ ಪಶ್ಚಿಮ ಬಂಗಾಳ ಮೂಲದ ಸುಮನ್ ಬಾಲಿಕ್ ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು.
ಸುಮನ್ ಬೈಕಿನಲ್ಲಿ ಪೆಟ್ರೋಲ್ ಖಾಲಿಯಾಗಿದ್ದ ಕಾರಣ ಆತ ಶೆಲ್ ಪೆಟ್ರೊಲ್ ಬಂಕ್‍ನಿಂದ ಬಾಟ್ಲಿಯಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಒನ್ ವೇಯಲ್ಲಿ ಹೋಗುತ್ತಿದ್ದ. ಈ ವೇಳೆ ಎದುರಿನಿಂದ ಬಂದ ಎಪಿ 04 ಯುಬಿ 1189 ನಂಬರ್ ನ ಲಾರಿ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಅಶೋಕ್ ಲೈಲಾಂಡ್ ಲಾರಿ ಕೆಳಗೆ ಸಿಲುಕಿಕೊಂಡು ಉಜ್ಜಿಕೊಂಡು ಹೋಗಿದೆ.
ಬೈಕ್ ಉಜ್ಜಿಕೊಂಡು ಹೋದ ಹಿನ್ನೆಲೆಯಲ್ಲಿ ಕಿಡಿ ಹೊತ್ತಿಕೊಂಡಿದ್ದು, ಬೈಕ್ ಹಾಗೂ ಲಾರಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಘಟನೆ ಬಳಿಕ ಲಾರಿ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಈ ಸಂಬಂಧ ಸದಾಶಿವನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.








