Prime Minister Narendra Modi | ಪ್ರಧಾನಿ ನರೇಂದ್ರ ಮೋದಿಗೆ 72ನೇ ಹುಟ್ಟುಹಬ್ಬದ ಸಂಭ್ರಮ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು 73 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.
ಅವರ ಹುಟ್ಟುಹಬ್ಬದ ಪ್ರಯುಕ್ತ ಮಧ್ಯ ಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ನಮಿಬಿಯಾದ ವಿಂಡೋಕ್ ನಿಂದ 8 ಚೀತಾಗಳು ಬರಲಿವೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 10.45ರ ಸುಮಾರಿಗೆ 8 ಚೀತಾಗಳಲ್ಲಿ ಮೂರು ಚಿರತೆಗಳನ್ನು ಬಿಡುಗಡೆ ಮಾಡಲಿದ್ದಾರೆ.
ಇತ್ತ ಬಿಜೆಪಿ ವತಿಯಿಂದ ದೇಶದಾದ್ಯಂತ ಹಲವು ಸೇವಾಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಇಂದಿನಿಂದ ಅಕ್ಟೋಬರ್ 2 ಗಾಂಧಿ ಜಯಂತಿಯವರೆಗೆ 21 ದಿನಗಳ ಕಾಲ ಸೇವೆ ಮತ್ತು ಸಮರ್ಪಣೆ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಮತ್ತೊಂದು ಕಡೆ ಪ್ರಧಾನಿಗಳಿಗೆ ಪ್ರಕ್ಷಬೇಧ ಮರೆತು ಎಲ್ಲಾ ರಾಜಕೀಯ ಮುಖಂಡರಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಶಶಿತರೂರ್, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವರು ಟ್ವಿಟ್ಟರ್ ವೇದಿಕೆಯಾಗಿ ಪ್ರಧಾನಿಗಳಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
ಇದಲ್ಲದೆ ಮೋದಿ ಅವರ ಜನ್ಮದಿನದ ಅಂಗವಾಗಿ ಇಂದು ದೆಹಲಿಯ ವಿಜ್ಞಾನ ಭವನದಲ್ಲಿ ಬಹು ನಿರೀಕ್ಷಿತ ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿಯನ್ನು ಬಿಡುಗಡೆ ಮಾಡಲಿದ್ದಾರೆ.