Jharkhand | ಬಸ್ ಅಪಘಾತಕ್ಕೆ 7 ಬಲಿ!
ಜಾರ್ಖಂಡ್ ನ ಹಜಾರಿಬಾಗ್ ನಲ್ಲಿ ಘಟನೆ
50 ಮಂದಿ ಪ್ರಯಾಣಿಸುತ್ತಿದ್ದ ಬಸ್ ಪಲ್ಟಿ
ಗಿರಿದಿಹ್ನಿಂದ ರಾಂಚಿಗೆ ಹೋಗುತ್ತಿದ್ದ ಬಸ್
ಸದರ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ
ರಾಂಚಿ : ಸೇತುವೆಯಿಂದ ನದಿಗೆ ಬಸ್ ಬಿದ್ದು ಏಳು ಮಂದಿ ಮೃತಪಟ್ಟಿರುವ ಘಟನೆ ಜಾರ್ಖಂಡ್ ನ ಹಜಾರಿಬಾಗ್ ಜಿಲ್ಲೆಯ ಸಿವಾನ್ನೆ ಬಳಿ ನಡೆದಿದೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗಿರಿದಿಹ್ ಜಿಲ್ಲೆಯಿಂದ ರಾಂಚಿಗೆ ತೆರಳುತ್ತಿದ್ದ ಬಸ್ ನಲ್ಲಿ 50 ಮಂದಿ ಪ್ರಯಾಣಿಸುತ್ತಿದ್ದರು.
ಸೇತುವೆಯ ತಡೆಗೋಡೆ ಕುಸಿದ ಪರಿಣಾಮ ಬಸ್ ನದಿಯ ಒಣ ಪ್ರದೇಶದಲ್ಲಿ ಬಿದ್ದಿದೆ.
ಘಟನೆಯಲ್ಲಿ ಏಳು ಮಂದಿ ಕೊನೆಯುಸಿರೆಳೆದಿದ್ದಾರೆ. ಕೆಲವು ಪ್ರಯಾಣಿಕರು ಬಸ್ ನಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಘಟನೆಯಲ್ಲಿ ಕೆಲವರಿಗೆ ಗಂಭೀರವಾದ ಗಾಯಗಳಾಗಿದ್ದು, ಸದರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ.
ಕೆಲವು ಗಾಯಾಳುಗಳನ್ನು ಹೆಚ್ಚಿನ ಚಿಕತ್ಸೆಗಾಗಿ ರಾಂಚಿಯ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.