ಬಳ್ಳಾರಿ ; ಸಾರಿಗೆ ಸಂಸ್ಥೆಗಳು ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಜಾರಿಗೆ ತರುವಲ್ಲಿ ಸದಾ ಮುಂಚೂಣಿಯಲ್ಲಿವೆ ಎಂದು ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ, ಹೇಳಿದ್ದಾರೆ.
ಇಂದು ಹೊಸಪೇಟೆ ಬಸ್ ಡಿಪೋದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ, ಸಸಿ ನೆಡುವ ಮೂಲಕ ನೆರೆವೆರಿಸಿದರು. ಬಳಿಕ ಮಾತನಾಡಿದ ಅವರು, ಸಾರಿಗೆ ಸಂಸ್ಥೆಗಳು ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಜಾರಿಗೆ ತರುವಲ್ಲಿ ಸದಾ ಮುಂಚೂಣಿಯಲ್ಲಿವೆ.
ಈ ವರ್ಷದ ವಿಶ್ವ ಪರಿಸರ ದಿನಾಚರಣೆಯ ತಿರುಳಿನಂತೆ ಪ್ರಕೃತಿಗಾಗಿ ನಮ್ಮ ಸಮಯವನ್ನು ಮೀಸಲಿಡಬೇಕು. ಈಗಾಗಲೇ ವಿಭಾಗಗಳು, ಘಟಕಗಳು ,ತರಬೇತಿ ಕೇಂದ್ರಗಳಲ್ಲಿ ಅರಣ್ಯೀಕರಣ ಕಾರ್ಯಕ್ರಮ ಬಹು ದೊಡ್ಡಮಟ್ಟದಲ್ಲಿ ನಡೆಯುತ್ತಿದೆ. ಸಸಿ ನೆಟ್ಟು ಅಲ್ಲಿಗೆ ಬಿಡದೆ ಅದನ್ನು ಕಾಪಾಡಿ ದೊಡ್ಡದಾಗುವವರೆಗೆ ಅದನ್ನು ಪೋಷಿಸುವ ಕೆಲಸ ಆಗಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿವಿಭಾಗೀಯ ನಿಯಂತ್ರಣಾಧಿಕಾರಿ, ಹೊಸಪೇಟೆ ವಿಭಾಗ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.








