Belgaum | ಬೈಲಹೊಂಗಲದಲ್ಲಿ ರಾಜಕೀಯ ಚಟುವಟಿಕೆ : ಬಿಜೆಪಿ ಟಿಕೆಟ್ ಗಾಗಿ ಫೈಟ್
ಬೆಳಗಾವಿ : ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಬೈಲಹೊಂಗಲ ಬಿಜೆಪಿ ಟಿಕೆಟ್ ಗಾಗಿ ಜಗದೀಶ್ ಮೆಟಗುಡ್ – ಡಾ.ವಿಶ್ವನಾಥ ಪಾಟೀಲ್ ಮಧ್ಯೆ ಪೈಪೋಟಿ ಏರ್ಪಟ್ಟಿದೆ.
2013ರ ವಿಧಾನಸಭೆ ಚುನಾವಣೆಯಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ ಡಾ.ವಿಶ್ವನಾಥ ಪಾಟೀಲ್ ಶಾಸಕರಾಗಿ ಆಯ್ಕೆಯಾಗಿದ್ದರು.
ಇದಾದ ಬಳಿಕ 2013ರಲ್ಲಿ ಜಗದೀಶ್ ಮೆಟಗುಡ್ ಬಿಜೆಪಿ ಅಭ್ಯರ್ಥಿ ಆಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು.
2018ರ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪಡೆದಿದ್ದ ಡಾ.ವಿಶ್ವನಾಥ ಪಾಟೀಲ್, ಆಗ ಪಕ್ಷೇತರರಾಗಿ ಸ್ಪರ್ಧಿಸಿದ್ದ ಜಗದೀಶ್ ಮೆಟಗುಡ್ ವಿರುದ್ಧ ಸೋಲು ಕಂಡಿದ್ದರು.
ಈಗ 2023ರ ಚುನಾವಣೆಯಲ್ಲಿ ಉಭಯ ನಾಯಕರ ಮಧ್ಯೆ ಟಿಕೆಟ್ ಪೈಪೋಟಿ ಶುರುವಾಗಿದೆ.
ಈ ನಡುವೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಬೈಲಹೊಂಗಲಕ್ಕೆ ಭೇಟಿ ನೀಡಿದ್ದರು.
ಗಾಣಿಗ ಸಮಾಜ ಹಾಗೂ ನೌಕರರ ಸಮಾವೇಶಕ್ಕೆಂದು ಬೈಲಹೊಂಗಲಕ್ಕೆ ಬಂದಿದ್ದ ಬಿಎಸ್‌ವೈ, ಮಾಜಿ ಶಾಸಕ ಜಗದೀಶ ಮೆಟಗುಡ್ಡ ಮನೆಗೆ ಭೇಟಿ ನೀಡಿದ್ದರು.
ಕಾರ್ಯಕ್ರಮದ ಬಳಿಕ ಮಾಜಿ ಶಾಸಕ ಡಾ. ವಿಶ್ವನಾಥ ಪಾಟೀಲ ಮನೆಗೂ ಬಿಎಸ್‌ವೈ ಭೇಟಿ ನೀಡಿದ್ದರು.
ಬಿ.ಎಸ್.ಯಡಿಯೂರಪ್ಪರ ನಡೆ ಉಭಯ ನಾಯಕರಲ್ಲಿ ತಳಮಳ ಉಂಟು ಮಾಡಿದೆ.