ಬೆಂಗಳೂರು : ಬಿಜೆಪಿಯಲ್ಲಿನ ನಾಯಕತ್ವ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್, ಕೆಲವು ಮೆಂಟಲ್ ಗಳು ತಮಗೆ ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಚುನಾವಣೆಯನ್ನು ಕಡಲೆಪುರಿ ವ್ಯಾಪಾರ ಎಂದು ಭಾವಿಸಿ 20, 30 ಎಂದು ನಂಬರ್ ಹೇಳುತ್ತಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಶಾಸಕರಿಗೆ ಅಗೌರವ ನೀಡುವುದು ಬೇಡ. ಯಾವ ಮಂತ್ರಿ ಯಾವ ಹೇಳಿಕೆ ನೀಡುತ್ತಿದ್ದಾರೆ. ಯಾವ ಹೊಟೇಲ್ ನಲ್ಲಿ ಯಾರು ಸಭೆ ನಡೆಸುತ್ತಿದ್ದಾರೆ, ನಿನ್ನೆ ರಾತ್ರಿ ಯಾರು, ಎಲ್ಲಿ, ಏನು ಸಭೆ ನಡೆಸಿದ್ದಾರೆ ಎಂಬುದನ್ನು ಗಮನಿಸುತ್ತಿದ್ದೇವೆ. ನಾವು ಇಲ್ಲಿ ಸುಮ್ಮನೆ ಕೂತಿಲ್ಲ. ನಮಗೆ ಬೇರೆಯವರ ಮನೆ ವಿಚಾರ ಬೇಡ. ನಾವುಂಟು ನಮ್ಮ ಮನೆ ಉಂಟು, ನಮ್ಮ ಶಾಸಕರುಂಟು ಎಂದು ಹೇಳೀದ್ದಾರೆ.
ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆಯ ಕುರಿತು ಕೊನೆಗೂ ಸರ್ಕಾರ ಮೌನ ಮುರಿದಿದೆ. ಇದುವರೆಗೂ ವಿರೋಧ ಪಕ್ಷಗಳು ಮಾಡುತ್ತಿದ್ದ...








