Electricity price hike | ವಿದ್ಯುತ್ ದರ ಏರಿಕೆ – ಏನೀ ಹುನ್ನಾರ ಎಂದ ಹೆಚ್ ಡಿಕೆ
ಬೆಂಗಳೂರು : ಕಲ್ಲಿದ್ದಲು ಖರೀದಿ ದರ ಹೆಚ್ಚಳವಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯಾಗಲಿದೆ. ಇಂಧನ ಹೊಂದಾಣಿಕೆ ಶುಲ್ಕವನ್ನು ಅಕ್ಟೋಬರ್ ನಿಂದ ಅನ್ವಯವಾಗುವಂತೆ ಮುಂದಿನ ಆರು ತಿಂಗಳ ಅವಧಿಗೆ ಪರಿಷ್ಕರಿಸಿ ಕರ್ನಾಟಕ ವಿದ್ಯುಚ್ಚಕ್ತಿ ನಿಯಂತ್ರಣ ಆಯೋಗ ಆದೇಶ ಹೊರಡಿಸಿದೆ. ಈ ಬಗ್ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.
ಕುಮಾರಸ್ವಾಮಿ ಟ್ವೀಟ್ ನಲ್ಲಿ, ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಬಿಜೆಪಿ ಸರಕಾರ ವಿದ್ಯುತ್ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ.
ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ @BJP4Karnataka ಸರಕಾರ ವಿದ್ಯುತ್ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ.1/4#ನವರಾತ್ರಿಗೆ_ಕರೆಂಟ್_ಶಾಕ್
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 24, 2022
ವಿಧಾನಮಂಡಲ ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್ ದರ ಏರಿಕೆ ಆಗಿದೆ! ಏನೀ ಹುನ್ನಾರ?ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರಕಾರ, ಕರೆಂಟ್ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ. ಪ್ರತಿ ಯೂನಿಟ್ʼಗೆ 24ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ & ಖಂಡನೀಯ.
ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿವೆ. ವಿದ್ಯುತ್ ಉತ್ಪಾದನೆ ಉತ್ತಮವಾಗಿದೆ. ಆದರೂ ಖರೀದಿ ವೆಚ್ಚದಲ್ಲಿ 1,244 ಕೋಟಿ ರೂ. ಹೆಚ್ಚಳ ಆಗಿದೆ ಎನ್ನುವ ಲೆಕ್ಕವನ್ನು ನಂಬುವ ರೀತಿಯಲ್ಲಿ ಇಲ್ಲ. ಇಂಧನ ವಲಯದ ಕೆಲ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಎಸ್ಕಾಂಗಳ ಭುಜದ ಮೇಲೆ ಗುಂಡಿಟ್ಟು, ಜನರಿಗೆ ಹೊಡೆಯುವ ಕೆಲಸ ಆಗುತ್ತಿದೆ.

ರಾಜ್ಯ ಬಿಜೆಪಿ ಸರಕಾರ ಜನರ ಪರ ಇಲ್ಲ ಎನ್ನುವುದು ಸತ್ಯ. ಜಾಗತಿಕ ಪೇಟೆಯಲ್ಲಿ ಕಚ್ಛಾತೈಲದ ಬೆಲೆ ನಿರಂತರ ಇಳಿದರೂ ದೇಶದಲ್ಲಿ ತೈಲಬೆಲೆ ಇಳಿಸದ ಕೇಂದ್ರದ ಬಿಜೆಪಿ ಸರಕಾರದ ಹಾದಿಯಲ್ಲೇ ರಾಜ್ಯ ಬಿಜೆಪಿ ಸರಕಾರವೂ ಸಾಗಿದೆ. ವಿದ್ಯುತ್ ದರದ ನಿರಂತರ ಏರಿಕೆ ಬಗ್ಗೆ ಗಂಭೀರ ಅನುಮಾನಗಳಿವೆ.
ವಿದ್ಯುತ್ ಸೋರಿಕೆ, ಕಳವು ತಡೆಲಾಗದ, ನವೀನ ತಂತ್ರಜ್ಞಾನ ಅಳವಡಿಸಿಕೊಳ್ಳದ ಬಿಜೆಪಿ ಸರಕಾರ ಅದಕ್ಷತೆಯ ಆಡಂಬೋಲ. ʼಬಡವರನ್ನು ಸುಲಿದು ಬಿಸ್ನೆಸ್ ಕ್ಲಾಸಿನ ಜನರ ಜೇಬು ತುಂಬುʼ ಎನ್ನುವುದು ಬಿಜೆಪಿ ತತ್ತ್ವ. ಅದನ್ನೇ ಕರ್ನಾಟಕದಲ್ಲೂ ಎಗ್ಗಿಲ್ಲದೆ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.






