Tumkur | ಸಕಾಲಕ್ಕೆ ಆಂಬುಲೆನ್ಸ್ ಸಿಗದೇ ಮಹಿಳೆ ಸಾವು
ತುಮಕೂರು : ಸಕಾಲಕ್ಕೆ ಆಂಬುಲೆನ್ಸ್ ಸಿಗದೇ ಮಹಿಳೆ ಮೃತಪಟ್ಟಿರುವ ಘಟನೆ ತುಮಕೂರಿನ ಮಧುಗಿರಿ ತಾಲೂಕಿ ಐಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. 65 ವರ್ಷದ ಜಯಮ್ಮ ಮೃತ ದುರ್ದೈವಿಯಾಗಿದ್ದಾರೆ.
ಜಯಮ್ಮ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಆಸ್ಪತ್ರೆಗೆ ಕರೆದೊಯ್ಯಲು 108 ಗೆ ಕರೆ ಮಾಡಲಾಗಿತ್ತು.

ಕರೆ ಮಾಡಿ ವಿಳಾಸ ತಿಳಿಸಿ ಒಂದು ಗಂಟೆ ಕಳೆದರೂ ಆಂಬುಲೆನ್ಸ್ ಬರದೇ ಜಯಮ್ಮ ಕೊನೆಯುಸಿರೆಳೆದಿದ್ದಾರೆ.
ಇದಾದ ಬಳಿಕ ಟಿಎಚ್ ಓ ಗೆ ಕರೆ ಮಾಡಿ ಸಕಾಲಕ್ಕೆ ಆಂಬುಲೆನ್ಸ್ ಸೌಲಭ್ಯ ದೊರೆತ್ತಿದ್ದರೆ ಪ್ರಾಣ ಉಳಿಸಬಹುದಿತ್ತು ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.
.








