ಸರಣಿ ಅಫಘಾತ – ASI ಪತ್ನಿ ಸೇರಿ ನಾಲ್ವರು ಸ್ಥಳದಲ್ಲೇ ಸಾವು..
ಕಾರು, ಬೈಕು ಮತ್ತು ಲಾರಿ ನಡುವೆ ಸರಣಿ ಅಫಘಾತ ಸಂಭವಿಸಿದ ಪರಿಣಾಮ ಎಎಸ್ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಬೂದಿಕೊಪ್ಪ ಕ್ರಾಸ್ನಲ್ಲಿ ನಡೆದಿದೆ.
ಬೆಳಗಾವಿ ನಿವಾಸಿಗಳಾದ ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು ಚಾಲಕ ನಿಖಿಲ್ ಕದಂ(24), ಮತ್ತು ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ವೃದ್ಧೆ ಹನುಮವ್ವಾ ಚಿಕ್ಕಲಕಟ್ಟಿ ಮೃತ ಪಟ್ಟಿದ್ದಾರೆ. ರುಕ್ಮಿಣಿ ಹಳಕಿ ಅವರು ಕುಡಚಿ ಪೊಲೀಸ್ ಠಾಣೆಯ ಎಎಸ್ಐ ವೈ.ಎಂ.ಹಲಕಿರವರ ಪತ್ನಿ.
ಬಾಗಲಕೋಟೆ ರಸ್ತೆಯ ಬೂದಿಗೊಪ್ಪ ಕ್ರಾಸ್ನಲ್ಲಿ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಬೆಳಗಾವಿಯತ್ತ ಬರುತ್ತಿತ್ತು ಈ ವೇಳೆ ಲಾರಿ, ಸ್ವಿಫ್ಟ್ ಡಿಸೈರ್ ಕಾರು, ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದೆ.
ಲಾರಿ ಡಿಕ್ಕಿಯ ರಭಸಕ್ಕೆ ಸ್ವಿಫ್ಟ್ ಡಿಸೈರ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಬೆಳಗಾವಿ ಎಸ್‌ಪಿ ಡಾ.ಸಂಜೀವ್ ಪಾಟೀಲ್, ಮುರಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.








