Man ki Baat: ಚಂಡೀಗಢ ವಿಮಾನ ನಿಲ್ದಾಣದಕ್ಕೆ ಭಗತ್ ಸಿಂಗ್ ಹೆಸರು..
ಇತ್ತೀಚೆಗೆ ಪಂಜಾಬ್ ಮತ್ತು ಹರಿಯಾಣ ರಾಜ್ಯಗಳು ಚಂಡೀಗಢ ವಿಮಾನ ನಿಲ್ದಾಣದ ಹೆಸರನ್ನು ಬದಲಾಯಿಸಲು ಒಪ್ಪಿಕೊಂಡಿದ್ದವು. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಇದನ್ನು ಘೋಷಿಸಿದ್ದಾರೆ. ಚಂಡೀಗಢ ವಿಮಾನ ನಿಲ್ದಾಣಕ್ಕೆ ಶಹೀದ್-ಎ-ಆಜಂ ಭಗತ್ ಸಿಂಗ್ ಹೆಸರಿಡಲಾಗುವುದು ಎಂದು ತಿಳಿಸಿದ್ದಾರೆ.
ಕೆಲವು ತಿಂಗಳ ಹಿಂದೆ ಪಂಜಾಬ್ ಸಿಎಂ ಭಗವಂತ್ ಮಾನ್ ಮತ್ತು ಹರಿಯಾಣ ಉಪ ಮುಖ್ಯಮಂತ್ರಿ ದುಷ್ಯಂತ್ ಚೌತಾಲಾ ಸಭೆ ನಡೆಸಿ ಅನುಮೋದನೆ ನೀಡಿದ್ದರು. ಆ ನಂತರವೇ ಈ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ. ಚಂಡೀಗಢ ಈ ಎರಡು ರಾಜ್ಯಗಳ ರಾಜಧಾನಿ ಹಾಗೂ ಕೇಂದ್ರಾಡಳಿತ ಪ್ರದೇಶವಾಗಿರುವುದು ಹೀಗೆ ಆಗಲು ಕಾರಣ.
‘ಮನ್ ಕಿ ಬಾತ್’ ಕಾರ್ಯಕ್ರಮದ 93 ನೇ ಸಂಚಿಕೆಯಲ್ಲಿ, ಪ್ರಧಾನಿ ಮೋದಿ, ‘ಭಗತ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವದ ಮೊದಲು, ಅವರಿಗೆ ಗೌರವಾರ್ಥವಾಗಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಇದೀಗ ಚಂಡೀಗಢ ವಿಮಾನ ನಿಲ್ದಾಣಕ್ಕೆ ಶಹೀದ್ ಭಗತ್ ಸಿಂಗ್ ಹೆಸರಿಡಲು ನಿರ್ಧರಿಸಲಾಗಿದೆ. ಚಂಡೀಗಢ, ಪಂಜಾಬ್ ಮತ್ತು ಹರಿಯಾಣದ ಜನತೆಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ, ಇದು ಬಹುನಿರೀಕ್ಷಿತ ಎಂದು ಹೇಳಿದರು. ಸರ್ದಾರ್ ಭಗತ್ ಸಿಂಗ್ ಅವರ ಜನ್ಮದಿನವನ್ನು ಸೆಪ್ಟೆಂಬರ್ 28 ರಂದು ಆಚರಿಸಲಾಗುತ್ತದೆ.








