ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Sandalwood Bond Ravi: ಪ್ರಮೋದ್ ನಟನೆಯ ‘ಬಾಂಡ್ ರವಿ’ ಟೀಸರ್ ರಿಲೀಸ್

ಪ್ರತಿಭಾನ್ವಿತ ನಾಯಕ ನಟ ಪ್ರಮೋದ್. ರತ್ನನ್ ಪ್ರಪಂಚದಲ್ಲಿ ಉಡಾಳ್ ಬಾಬು ಆಗಿ ಸಿನಿ ಪ್ರೇಕ್ಷಕರ ಮನಸೂರೆಗೊಂಡ ಪ್ರಮೋದ್ ‘ಬಾಂಡ್ ರವಿ’ಯಾಗಿ ತೆರೆ ಮೇಲೆ ಬರೋಕೆ ಸಜ್ಜಾಗಿದ್ದಾರೆ.  ಈ ಚಿತ್ರದ ಇಂಟ್ರಸ್ಟಿಂಗ್ ಹಾಗೂ ಅಷ್ಟೇ ಖಡಕ್ ಆದ ಟೀಸರ್ ಇಂದು ಬಿಡುಗಡೆಯಾಗಿದೆ.

Naveen Kumar B C by Naveen Kumar B C
September 25, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಪ್ರಮೋದ್ ನಟನೆಯ ‘ಬಾಂಡ್ ರವಿ’ ಟೀಸರ್ ರಿಲೀಸ್

ಸ್ಯಾಂಡಲ್ ವುಡ್ ಅಂಗಳದ ಯುವ ಹಾಗೂ ಪ್ರತಿಭಾನ್ವಿತ ನಾಯಕ ನಟ ಪ್ರಮೋದ್. ರತ್ನನ್ ಪ್ರಪಂಚದಲ್ಲಿ ಉಡಾಳ್ ಬಾಬು ಆಗಿ ಸಿನಿ ಪ್ರೇಕ್ಷಕರ ಮನಸೂರೆಗೊಂಡ ಪ್ರಮೋದ್ ‘ಬಾಂಡ್ ರವಿ’ಯಾಗಿ ತೆರೆ ಮೇಲೆ ಬರೋಕೆ ಸಜ್ಜಾಗಿದ್ದಾರೆ.  ಈ ಚಿತ್ರದ ಇಂಟ್ರಸ್ಟಿಂಗ್ ಹಾಗೂ ಅಷ್ಟೇ ಖಡಕ್ ಆದ ಟೀಸರ್ ಇಂದು ಬಿಡುಗಡೆಯಾಗಿದೆ. ಪ್ರಮೋದ್ ಖಡಕ್ ಅಂಡ್ ಮಾಸ್ ಆಕ್ಟಿಂಗ್ ಎಲ್ಲರ ಗಮನ ಸೆಳೆಯುತ್ತಿದೆ. ಟೀಸರ್ ನೋಡಿದವರು ಬಾಂಡ್ ರವಿ ಬ್ರ್ಯಾಂಡ್ ರವಿ ಆಗೋದ್ರಲ್ಲಿ ಡೌಟೇ ಇಲ್ಲ ಅಂತಿದ್ದಾರೆ. ಟೀಸರ್ ಪತ್ರಕರ್ತರಿಂದ ಬಿಡುಗಡೆಯಾಗಿದ್ದು ವಿಶೇಷ. ಇದಕ್ಕೆ ಕಾರಣ ನಟ ಪ್ರಮೋದ್. ನಾನು ಏನು ಆಗಿಲ್ಲದೆ ಇದ್ದಾಗಿನಿಂದಲೂ ನನ್ನನ್ನು  ಸಪೋರ್ಟ್ ಮಾಡಿಕೊಂಡು ಬಂದವರು ಪತ್ರಕರ್ತರು. ಎಂಟು ವರ್ಷದಿಂದ ನನ್ನ ಪ್ರತಿ ಹೆಜ್ಜೆಯಲ್ಲಿ ಮಾಧ್ಯಮ ಹಾಗೂ ಪತ್ರಕರ್ತ ಮಿತ್ರರ ಸಪೋಟ್ ಬಹಳ ದೊಡ್ಡದು. ಆದ್ದರಿಂದ ಈ ಚಿತ್ರದ ಟೀಸರ್ ಪತ್ರಕರ್ತ ಮಿತ್ರರೇ ಬಿಡುಗಡೆ ಮಾಡಿಕೊಡಬೇಕು ಎಂದು ಪತ್ರಕರ್ತರ ಮೂಲಕ ಟೀಸರ್ ಬಿಡುಗಡೆ ಮಾಡಿಸಿದ್ದು ಬಹಳ ವಿಶೇಷವಾಗಿತ್ತು.

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

‘ಗೀತಾ ಬ್ಯಾಂಗಲ್ ಸ್ಟೋರ್’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ನಾಯಕ ನಟನಾಗಿ ಎಂಟ್ರಿ ಕೊಟ್ಟ ಪ್ರಮೋದ್ ‘ಮತ್ತೆ ಉದ್ಭವ’, ‘ಪ್ರೀಮಿಯರ್ ಪದ್ಮಿನಿ’ ಹಾಗೂ ‘ರತ್ನನ್ ಪ್ರಪಂಚ’ ಸಿನಿಮಾಗಳಲ್ಲಿ ತಮ್ಮ ವಿಶೇಷ ಅಭಿನಯದ ಮೂಲಕ ಅಪಾರ ಮನ್ನಣೆ ಗಳಿಸಿಕೊಂಡಿದ್ದಾರೆ. ‘ಬಾಂಡ್ ರವಿ’ ಸಿನಿಮಾ ಪ್ರಮೋದ್ ಗೆ ಬಿಗ್ ಬ್ರೇಕ್ ನೀಡೋದ್ರಲ್ಲಿ ಡೌಟೇ ಇಲ್ಲ ಎನ್ನುವಂತಿದೆ ಬಿಡುಗಡೆಯಾಗಿರುವ ಪ್ರಾಮಿಸಿಂಗ್ ಟೀಸರ್. ಪಂಚಿಂಗ್  ಹಾಗೂ ಮಾಸ್ ಡೈಲಾಗ್ ಗಳು ಟೀಸರ್ ನಲ್ಲಿ ಗಮನ ಸೆಳೆದಿದ್ದು ಸಿನಿಮಾ ಮೇಲಿನ ಕ್ಯೂರಿಯಾಸಿಟಿಯನ್ನು ಹೆಚ್ಚಿಸಿದೆ.

ನಟ ಪ್ರಮೋದ್ ಮಾತನಾಡಿ ನಾನು ಈ ಸಿನಿಮಾವನ್ನು ತುಂಬಾ ಮೆಚ್ಚಿ ಇಷ್ಟಪಟ್ಟು ಮಾಡಿದ್ದೇನೆ. ಈ ಸಿನಿಮಾ ಮೇಲೆ ಕೆಟ್ಟ ನಂಬಿಕೆ ಇದೆ. ಸಿನಿಮಾ ಗೆದ್ದೇ ಗೆಲ್ಲುತ್ತೆ ಅನ್ನೋ ಬಲವಾದ ನಂಬಿಕೆ ಕೂಡ ನನಗಿದೆ. ಅಷ್ಟು ಒಳ್ಳೆಯ ಕಂಟೆಂಟ್, ಕಥೆ ಸಿನಿಮಾದಲ್ಲಿದೆ. ನಾನು ಕೂಡ ಈ ಸಿನಿಮಾ ಮೂಲಕ ದೊಡ್ಡ ಮಟ್ಟದಲ್ಲಿ ಗೆಲ್ಲುತ್ತೇನೆ ಎಂದು ಭರವಸೆಯ ಮಾತುಗಳನ್ನಾಡಿದ್ರು.

ಸಂಗೀತ ನಿರ್ದೇಶಕ ಮನೋಮೂರ್ತಿ ಮಾತನಾಡಿ ನನಗೂ ಈ ಸಿನಿಮಾ ಬಗ್ಗೆ ಅಪಾರ ಭರವಸೆ ಇದೆ. ಮುಂಗಾರು ಮಳೆ ಕೂಡ ಹೀಗೆ ಆರಂಭವಾಗಿದ್ದು, ಅದು ದೊಡ್ಡ ಹಿಟ್ ಆಯ್ತು ಈ ಸಿನಿಮಾ ಕೂಡ ಹಿಟ್ ಆಗುತ್ತೆ. ಪ್ರಮೋದ್ ಮತ್ತು ಕಾಜಲ್ ಕುಂದರ್ ಇಬ್ಬರು ಅಮೋಘವಾಗಿ ನಟಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ರು.

ಚಿತ್ರದ ನಟಿ ಕಾಜಲ್ ಕುಂದರ್ ಮಾತನಾಡಿ ನನ್ನ ಮೇಲೆ ನಂಬಿಕೆ ಇಟ್ಟು ಒಳ್ಳೆಯ ಪಾತ್ರವನ್ನು ಕೊಟ್ಟಿದ್ದಕ್ಕೆ  ಚಿತ್ರತಂಡಕ್ಕೆ ತುಂಬಾ ಧನ್ಯವಾದಗಳು. ನನ್ನ ಪಾತ್ರಕ್ಕೆ ನ್ಯಾಯ ಒದಗಿಸಿದ್ದೇನೆ  ಎಂಬ ನಂಬಿಕೆ ಇದೆ. ಪ್ರಮೋದ್ ಅವರ ಜೊತೆ ನಟಿಸಿದ್ದು ತುಂಬಾ ಖುಷಿ ಕೊಟ್ಟಿದೆ ಎಂದ್ರು.

ಚಿತ್ರದ ನಿರ್ದೇಶಕ ಪ್ರಜ್ಚಲ್ ಮಾತನಾಡಿ ಇದು ನನ್ನ ಮೊದಲ ಸಿನಿಮಾ. ಸಿನಿಮಾ ಚೆನ್ನಾಗಿ ಮೂಡಿ ಮುಂದಿದೆ. ಒಂದೊಳ್ಳೆ ಸಿನಿಮಾ ಮಾಡಿದ ತೃಪ್ತಿ ನನಗಿದೆ. ಪ್ರಮೋದ್ ಅವರು ನನಗೆ ಸಿಕ್ಕಿದ್ದು ನನ್ನ ಅದೃಷ್ಟ. ಅವ್ರು ವ್ಯಕ್ತಿಯಾಗಿ, ನಟನಾಗಿ ನನಗೆ ತುಂಬಾ ಸಪೋರ್ಟ್ ಮಾಡಿದ್ದಾರೆ. ನವೆಂಬರ್ ನಲ್ಲಿ ಸಿನಿಮಾ ಬಿಡುಗಡೆಗೆ ಪ್ಲ್ಯಾನ್ ಮಾಡಿದ್ದೇವೆ. ಖಂಡಿತ ಈ ಚಿತ್ರ ಎಲ್ಲರಿಗೂ ಇಷ್ಟವಾಗುತ್ತೆ ಎಂದು ತಮ್ಮ ಸಿನಿಮಾ ಬಗ್ಗೆ ಮನದಾಳದ ಮಾತುಗಳನ್ನ ಹಂಚಿಕೊಂಡ್ರು.

ಬಾಂಡ್ ರವಿ ಆಕ್ಷನ್ ಲವ್ ಸ್ಟೋರಿ ಸಿನಿಮಾ. ಚಿತ್ರರಂಗದಲ್ಲಿ ಹನ್ನೊಂದು ವರ್ಷಗಳಿಂದ ನಿರ್ದೇಶನ ವಿಭಾಗದಲ್ಲಿ ದುಡಿದ ಅನುಭವ ಇರುವ ಪ್ರಜ್ವಲ್ ಎಸ್.ಪಿ. ಬಾಂಡ್ ರವಿ ಸೂತ್ರಧಾರ.  ನರಸಿಂಹಮೂರ್ತಿ ಲೈಫ್ ಲೈನ್ ಫಿಲಂ ಬ್ಯಾನರ್ ನಡಿ ಬಾಂಡ್ ರವಿ ಸಿನಿಮಾಗೆ ಬಂಡವಾಳ ಹೂಡಿದ್ದು, ಮಲ್ಲಿಕಾರ್ಜುನ್ ಕಾಶಿ ಹಾಗೂ ಝೇವಿಯರ್ ಫರ್ನಾಂಡಿಸ್ ಸಹ ನಿರ್ಮಾಪಕರ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಚಿತ್ರದಲ್ಲಿ ಅಪ್ಪು ಅಭಿಮಾನಿಯಾಗಿ ಪ್ರಮೋದ್ ನಟಿಸಿದ್ದು ಇವರಿಗೆ ಜೋಡಿಯಾಗಿ ಕಾಜಲ್ ಕುಂದರ್ ತೆರೆ ಹಂಚಿಕೊಂಡಿದ್ದಾರೆ.

ಬೆಂಗಳೂರು, ಶಿವಮೊಗ್ಗ, ಕೊಡಚಾದ್ರಿ, ಕುದುರೆಮುಖ, ಉಡುಪಿ, ಮಂಗಳೂರು ಭಾಗಗಳಲ್ಲಿ ಬಾಂಡ್ ರವಿ ಚಿತ್ರೀಕರಣ ನಡೆಸಲಾಗಿದೆ. ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್ ಚಿತ್ರದ ತಾರಾ ಬಳಗದಲ್ಲಿದ್ದಾರೆ. ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಸುನೀಲ್ ಮತ್ತು ದೇವ್ ಎನ್, ರಾಜ್ ಸಂಭಾಷಣೆ, ಮನೋಮೂರ್ತಿ ಸಂಗೀತ ಚಿತ್ರಕ್ಕಿದೆ.

Tags: Bond RaviSandalwoodteaser
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram