PFI Ban – ಈ ಕ್ಷಣದಿಂದಲೇ ದೇಶದಾದ್ಯಂತ PFI ಬ್ಯಾನ್
ನವದೆಹಲಿ : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ದೇಶದಾದ್ಯಂತ ನಿಷೇಧ ಮಾಡುವ ಮೂಲಕ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಉಗ್ರ ಸಂಘಟನೆಗಳ ಜೊತೆ ನೇರವಾದ ಸಂಬಂಧ ಹೊಂದಿದ ಹಿನ್ನೆಲೆಯಲ್ಲಿ ಪಿಎಫ್ ಐ ಮತ್ತು ಅದರ ಎಂಟು ಅಂಗಸಂಸ್ಥೆಗಳನ್ನು ಕಾನೂನು ಬಾಹಿರ ಸಂಘ ಎಂದು ಘೋಷಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ನಿಷೇಧ ಮಾಡಲಾಗಿದೆ. ಈ ಕುರಿತು ಗೃಹ ಸಚಿವಾಲಯ ಅಧಿಕೃತ ಆದೇಶ ಹೊರಡಿಸಿದೆ.

ನಿಷೇಧವಾದ ಸಂಘಟನೆಗಳು : ಕಾನೂನು ಬಾಹಿರ ಚಟುವಟಿಕೆಗಳ ಕಾಯ್ದೆಯ ಅಡಿ ಪಿಎಫ್ ಐ, ರಿಹಬ್ ಇಂಡಿಯಾ ಫೌಂಡೇಷನ್, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್, ನ್ಯಾಷನಲ್ ಕಾನ್ಪೆಡರೇಷನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್, ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಫೌಂಡೇಶನ್ ಕೇರಳ ಸಂಘಗಳನ್ನು ನಿಷೇಧ ಮಾಡಲಾಗಿದೆ.
ಅಂದಹಾಗೆ ಸೆಪ್ಟೆಂಬರ್ 22 ಮತ್ತು ಸೆಪ್ಟಂಬರ್ 27 ರಂದು ರಾಷ್ಟ್ರೀಯ ತನಿಖಾ ಸಂಸ್ಥೆ ದೇಶದಾದ್ಯಂತ ಏಕಕಾಲದಲ್ಲಿ ಪಿಎಫ್ ಐ ಸಂಘಟನೆಯ ಕಚೇರಿ ಮತ್ತು ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿತ್ತು.
Popular Front of India Ban








