PFI Ban | ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
ಬೆಂಗಳೂರು : ಕೇಂದ್ರ ಸರ್ಕಾರ ದೇಶದಾದ್ಯಂತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ಐದು ವರ್ಷಗಳ ಕಾಲ ಬ್ಯಾನ್ ಮಾಡಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಕೇಂದ್ರ ಗುಪ್ತಚರ ಇಲಾಖೆಯಿಂದ ರೆಡ್ ಅಲರ್ಟ್ ಬಂದಿದ್ದು, ಬೆಂಗಳೂರಿನ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಮಾಡಿಕೊಳ್ಳಲಾಗಿದೆ.

ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಗಸ್ತು, ಮತ್ತು ಹೆಚ್ಚಿನ ನಿಗಾ ಇಡಲಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಾದ್ಯಂತ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ಸದ್ಯಕ್ಕೆ ಯಾವುದೇ ಪ್ರತಿಭಟನೆ, ರ್ಯಾಲಿಗೆ ಅವಕಾಶ ನೀಡದಿರಲು ಪೊಲೀಸ್ ಇಲಾಖೆ ನಿರ್ಧಾರ ಮಾಡಿದೆ.








