ಬೀಜಿಂಗ್, ಜೂನ್ 6: ಇಂದು ಭಾರತ – ಚೀನಾ ಸೇನೆಯ ಲೆಫ್ಟಿನೆಂಟ್ ಜನರಲ್‌ಗಳ ನೇತೃತ್ವದಲ್ಲಿ ಭಾರತ ಮತ್ತು ಚೀನಾ ಮಿಲಿಟರಿ ನಡುವೆ ಸುದೀರ್ಘ ಮಾತುಕತೆ ನಡೆಯಲಿದೆ.
ಪೂರ್ವ ಲಡಾಖ್ ನಲ್ಲಿ ಸುಮಾರು ಒಂದು ತಿಂಗಳಿಂದ ಎದುರಾಗಿರುವ ಉದ್ವಿಗ್ನ ವಾತಾವರಣವನ್ನು ಶಮನಗೊಳಿಸುವ ನಿಟ್ಟಿನಲ್ಲಿ ಎರಡೂ ಕಡೆಯವರು ಮತ್ತೊಮ್ಮೆ ಚರ್ಚಿಸುವ ಸಾಧ್ಯತೆ ಇದೆ.

ಭಾರತ- ಚೀನಾ ನಡುವೆ ಗಡಿಯಲ್ಲಿ ಸೃಷ್ಟಿಯಾಗಿರುವ ಯುದ್ಧದ ವಾತಾವರಣದ ನಿವಾರಣೆಗಾಗಿ ಎರಡೂ ದೇಶಗಳ ರಾಜತಾಂತ್ರಿಕ ಅಧಿಕಾರಿಗಳ ಸಮಾಲೋಚನೆ ಸಭೆ ನಿಗಧಿಯಾಗಿರುವ ಹಿನ್ನೆಲೆಯಲ್ಲೇ ಭಾರತದೊಂದಿಗಿನ ಗಡಿ ವಿವಾದವನ್ನು ಸರಿಯಾದ ರೀತಿಯಲ್ಲಿ ಬಗೆಹರಿಸಿಕೊಳ್ಳುತ್ತೇವೆ ಎಂದು ಚೀನಾ ಹೇಳಿದೆ.
ಈ ಸಂಬಂಧ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಗೆಂಗ್ ಶುವಾಂಗ್ ಗಡಿಗೆ ಮಾತನಾಡಿದ್ದು, ನಾವು ಮಿಲಿಟರಿ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ಸಂವಹನ ನಡೆಸುವ ಮುಖಾಂತರ ಗಡಿಗೆ ಸಂಬಂಧಿಸಿದ ಸಮಸ್ಯೆಯನ್ನು ಶಾಂತ ರೀತಿಯಲ್ಲಿ ಪರಿಹರಿಸಲು ಬಯಸುತ್ತೇವೆ ಎಂದು ತಿಳಿಸಿದ್ದಾರೆ.
ಪ್ರಸ್ತುತ ಭಾರತ ಮತ್ತು ಚೀನಾ ನಡುವಿನ ಗಡಿ ಪ್ರದೇಶದ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದ್ದಾರೆ.








