ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮೋದಿ ನಾಯಕತ್ವ ದೊರೆತಿರುವುದು ಭಾರತೀಯರ ಪುಣ್ಯ : ಸಚಿವ ಸುಧಾಕರ್…

admin by admin
June 6, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಚಿಕ್ಕಬಳ್ಳಾಪುರ : ಕರೋನಾ ತಂದೊಡ್ಡಿರುವ ಈ ಸಂಕಷ್ಟ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ದೊರೆತಿರುವುದು ಭಾರತೀಯರ ಪುಣ್ಯ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಬಣ್ಣಿಸಿದ್ದಾರೆ .

ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲರನ್ನೂ ಒಗ್ಗಟ್ಟಿನಿಂದ ಕರೆದೊಯ್ಯುವ ಸಮರ್ಥ ನಾಯಕತ್ವವನ್ನು ಮೋದಿ ದೇಶಕ್ಕೆ ನೀಡಿದ್ದಾರೆ ಎಂದು ನಗರದ ಒಕ್ಕಲಿಗರ ಭವನದಲ್ಲಿ ನಡೆದ ಕರೋನಾ ಯೋಧರ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಶನಿವಾರ ಮಾತನಾಡಿದರು .

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

ನಮ್ಮಲ್ಲಿ ಒಗ್ಗಟ್ಟು ಇದ್ದರೆ ಎಂತಹ ವೈರಾಣು ಬಂದರೂ ಅದನ್ನು ಹಿಮ್ಮೆಟ್ಟಿಸಬಹುದು ಅಂತಹ ಒಗ್ಗಟ್ಟನ್ನು ದೇಶ ಪ್ರದರ್ಶಿಸಿದೆ . ಅದಕ್ಕೆ ಮೋದಿಯವರ ಸಮರ್ಥ ನಾಯಕತ್ವ ಕಾರಣ ಎಂದರು . ಸತತವಾಗಿ ಎಲ್ಲ ರಾಜ್ಯಗಳ ಜೊತೆ ವಿಡಿಯೊ ಸಂವಾದದ ಮೂಲಕ ಮಾಹಿತಿ ತಿಳಿದುಕೊಂಡು ಸೂಕ್ತ ಮಾರ್ಗಸೂಚಿಗಳನ್ನು ನೀಡಿದರು . ನಾನು ಸಹ ನಾಲ್ಕು ಸಂವಾದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದೆ ಅವರ ತಾಳ್ಮೆ ಮತ್ತು ಜಾಣ್ಮೆಯ ನಡೆ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದರು .

ಸರ್ಕಾರದ ಜೊತೆಗೆ ಆಡಳಿತ ಶಾಹಿ ಕೈಜೋಡಿಸಿದಾಗ ಮಾತ್ರ ಯಾವುದೇ ನಿರ್ಧಾರಗಳ ಯಶಸ್ವಿ ಅನುಷ್ಠಾನ ಸಾಧ್ಯವಿದೆ . ಕರೋನಾ ವಿರುದ್ಧದ ಹೋರಾಟದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಶ್ಲಾಘಿಸಿದರು .

ಜಿಲ್ಲಾಡಳಿತದ ಪರಿಶ್ರಮದಿಂದಲೇ ಕರೋನಾ ನಿಯಂತ್ರಣ ಸಾಧ್ಯವಾಗಿದೆ ಇದಕ್ಕಾಗಿ ಶ್ರಮಿಸಿದ ಎಲ್ಲರನ್ನೂ ನಾನು ಅಭಿನಂದಿಸುತ್ತೇನೆ ಎಂದರು . ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಶ್ರಮವನ್ನು ಮೆಚ್ಚಿ ಸಾರ್ವಜನಿಕರು ಅವರನ್ನು ಸನ್ಮಾನಿಸುತ್ತಿರುವುದು ವಿನೂತನವಾದ ಕಾರ್ಯಕ್ರಮ ಇದು ನನ್ನಲ್ಲಿ ಹೆಮ್ಮೆ ಮೂಡಿಸಿದೆ ಎಂದರು .
ಕಣ್ಣಿಗೆ ಕಾಣದ ವೈರಾಣು ಇಡೀ ಜಗತ್ತನ್ನು ಆವರಿಸಿ ಆತಂಕ ಮೂಡಿಸಿದೆ ದೊಡ್ಡ ದೊಡ್ಡ ರಾಷ್ಟ್ರಗಳೇ ಇದನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗದೆ ಪರಿತಪಿಸುತ್ತಿವೆ ಇಂತಹ ಸಂದರ್ಭದಲ್ಲಿ ಕೇಂದ್ರದಲ್ಲಿ ಮೋದಿ ಅವರ ನಾಯಕತ್ವ ಮತ್ತು ರಾಜ್ಯದಲ್ಲಿ ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಯಶಸ್ವಿಯಾಗಿ ನಿಭಾಯಿಸಿದ್ದೇವೆ ಎಂದರು .

ವಿದೇಶಗಳಲ್ಲಿ ರೋಗ ಕಾಣಿಸಿಕೊಂಡ ಬೆನ್ನಲ್ಲೇ ಮೊದಲು ಎಚ್ಚೆತ್ತುಕೊಂಡ ರಾಜ್ಯ ನಮ್ಮದು . ಜನದಟ್ಟಣೆ ಪ್ರದೇಶಗಳಲ್ಲಿ ಲಾಕ್ ಡೌನ್ ಜಾರಿಗೊಳಿಸಿದ ಮೊದಲ ರಾಜ್ಯ ಕರ್ನಾಟಕ ಹೀಗಾಗಿ ಸೋಂಕು ಹೆಚ್ಚು ಹರಡದಂತೆ ನೋಡಿಕೊಳ್ಳಲು ಸಾಧ್ಯವಾಯಿತು ಎಂದರು .

ಕಳೆದ ಎರಡು ಮೂರು ತಿಂಗಳಲ್ಲಿ ಬೇಕಾಗಿದ್ದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಮುಂದೆ ಎದುರಾಗುವ ಎಲ್ಲ ಸವಾಲುಗಳನ್ನು ಸಮರ್ಥವಾಗಿ ಎದುರಿಸಲಾಗುವುದು ಎಂದರು . ಮುಂದಿನ ದಿನಗಳಲ್ಲಿ ಸಾರ್ವಜನಿಕರು ಸರ್ಕಾರದ ಸೂಚನೆಗಳ ಪ್ರಕಾರ ದೈನಂದಿನ ಚಟುವಟಿಕೆಗಳಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿಕೊಳ್ಳಬೇಕು , ಮಾಸ್ಕ್ ಧರಿಸುವುದು, ಶುಚಿತ್ವ ಕಾಯ್ದುಕೊಳ್ಳುವುದು, ಸಾಮಾಜಿಕ ಅಂತರ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಲಹೆ ನೀಡಿದರು .

ಜಿಲ್ಲೆಯ ನಾಗರಿಕರ ವೇದಿಕೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂರಕ್ಕೂ ಹೆಚ್ಚು ಕರೋನಾ ಯೋಧರನ್ನು ಸನ್ಮಾನಿಸಲಾಯಿತು . ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಚಿಕ್ಕ ನರಸಿಂಹಯ್ಯ ,ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇತರೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಚಾಲನೆ : ಇದಕ್ಕೂ ಮೊದಲು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಸ್ವಚ್ಛ ಭಾರತ್ ಮಿಷನ್ ಕಾರ್ಯಕ್ರಮದಡಿ ಗ್ರಾಮ ಪಂಚಾಯಿತಿಗಳಿಗೆ ತ್ಯಾಜ್ಯ ಸಾಗಾಣಿಕೆ ವಾಹನಗಳ ವಿತರಣೆ ಕಾರ್ಯಕ್ರಮವನ್ನು ಸಚಿವರು ಉದ್ಘಾಟಿಸಿದರು . ಪ್ರಥಮ ಹಂತದಲ್ಲಿ ಜಿಲ್ಲೆಯ ಮೂವತ್ತು ಆರು ಗ್ರಾಮ ಪಂಚಾಯಿತಿಗಳಿಗೆ ತ್ಯಾಜ್ಯ ವಿಲೇವಾರಿ ವಾಹನಗಳನ್ನು ವಿತರಿಸಲಾಯಿತು . ಮುಂದಿನ ಹಂತದಲ್ಲಿ ಜಿಲ್ಲೆಯ ಎಲ್ಲ ನೂರ ಐವತ್ತು ಏಳು ಗ್ರಾಮ ಪಂಚಾಯಿತಿಗಳಿಗೆ ಇದನ್ನು ವಿತರಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು .

ಪ್ರತಿ ಗ್ರಾಮ ಪಂಚಾಯಿತಿಗೆ ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಇಪ್ಪತ್ತು ಲಕ್ಷ ರೂಗಳ ಅನುದಾನ ನಿಗದಿಪಡಿಸಲಾಗಿದೆ . ಅದು ಲಕ್ಷಗಳ ವೆಚ್ಚದಲ್ಲಿ ತ್ಯಾಜ್ಯ ವಿಲೇವಾರಿ ವಾಹನಗಳನ್ನು ವಿತರಿಸಲಾಗುತ್ತಿದೆ. ಜಿಲ್ಲೆಯ ಎಲ್ಲಾ ಪಂಚಾಯಿತಿಗಳಲ್ಲಿ ವೈಜ್ಞಾನಿಕ ರೀತಿಯಲ್ಲಿ ಘನತ್ಯಾಜ್ಯ ವಿಲೇವಾರಿಗೆ ತ್ಯಾಜ್ಯ ಘಟಕಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು .

Tags: Dr. K Sudhakar
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram