ಬಳ್ಳಾರಿ : ಗಣಿನಾಡು ಬಳ್ಳಾರಿಯಲ್ಲಿ ಮತ್ತೆ ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ಧೃಡವಾಗಿದೆ. ಗಣಿನಾಡಲ್ಲಿ ಕೊರೊನಾ ವಾರಿಯರ್ಸ್ ಗಳ ಮೇಲೆ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಕರ್ತವ್ಯನಿರತ ಮೂರು ಜನ ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ಧೃಡವಾಗಿದೆ. ಟಿಬಿ ಡ್ಯಾಂ, ಹೊಸಪೇಟೆ ನಗರ, ಮರಿಯಮ್ಮನಹಳ್ಳಿ ಠಾಣೆಯ ತಲಾ ಒಂದು ಸಿಬ್ಬಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದ್ದರಿಂದಾಗಿ ಬಳ್ಳಾರಿ ಜಿಲ್ಲಾಡಳಿತಕ್ಕೆ ಆತಂಕ ಹೆಚ್ಚಾಗಿದೆ.
ಸೋಂಕಿತರ ಸಂಪರ್ಕದಲ್ಲಿದ್ದವರನ್ನ ಪತ್ತೆ ಹಚ್ಚಲು ಜಿಲ್ಲಾಡಳಿತ ಹರಸಾಹಸ ಪಡುತ್ತಿದೆ. ಕೊರೊನಾ ಮೂಲ ಪತ್ತೆಹಚ್ಚುವದೇ ಜಿಲ್ಲಾಡಳಿತಕ್ಕೀಗ ತಲೆನೋವಾಗಿದೆ. ಜೊತೆಗೆ ಜಿಂದಾಲ್ ನ ಮೂವರಿಗೆ ಕೊರೊನಾ ಪತ್ತೆಯಾಗಿತ್ತು. ಸಂಜೆ ಮತ್ತೆ ಮೂರೂ ಜನ ಪೊಲೀಸ್ ಸಿಬ್ಬಂದಿಗಳಿಗೆ ಸೋಂಕು ಕಾಣಿಸಿಕೊಂಡಿದೆ. ಇಲ್ಲಿಯವರೆಗೆ ಈ ಪ್ರಕರಣಗಳು ಸೇರಿ ಜಿಲ್ಲೆಯಲ್ಲಿ ಒಟ್ಟು 60 ಪ್ರಕರಣಗಳು ಪತ್ತೆಯಾಗಿವೆ.








