ಮಂಗಳೂರು, ಜೂನ್ 7: ಮುಂದಿನ ದಿನಗಳಲ್ಲಿ ಹೊರರಾಜ್ಯ ಮತ್ತು ಹೊರದೇಶಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬರುವವರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ ಇದ್ದು, ಈ ಹಿನ್ನೆಲೆಯಲ್ಲಿ ತಂತ್ರಜ್ಞಾನದ ಮೂಲಕ ಆ್ಯಪ್ ತಯಾರಿಸಿ ಕ್ವಾರಂಟೈನ್ ನಲ್ಲಿ ಇರುವವರ ಮೇಲೆ ಕಟ್ಟುನಿಟ್ಟಾಗಿ ನಿಗಾ ಇಡಲಾಗುವುದು ಎಂದು ದ.ಕ.ಜಿಲ್ಲಾಧಿಕಾರಿ ಸಿಂಧು ರೂಪೇಶ್ ಹೇಳಿದ್ದಾರೆ.
ಶನಿವಾರ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕ್ವಾರಂಟೈನ್ ನಲ್ಲಿ ಇರುವವರ ಮಾಹಿತಿ ಹಾಗೂ ಹೊಸ ತಾಂತ್ರಿಕ ವ್ಯವಸ್ಥೆಗಳ ಕುರಿತು ತಾಲೂಕಿನ ಗ್ರಾ.ಪಂ.ಗಳ ಪಿಡಿಒ, ಗ್ರಾಮಕರಣಿಕರು ಹಾಗೂ ಬಿಲ್ ಕಲೆಕ್ಟರ್ ಗಳ ಸಭೆಯನ್ನು ಬಂಟ್ವಾಳ ತಾ.ಪಂ.ನ ಎಸ್ ಜಿ ಎಸ್ ವಿ ಸಭಾಂಗಣದಲ್ಲಿ ನಡೆಸಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಸಭೆಯಲ್ಲಿ ಎಡಿಸಿ ಎಂ.ಜೆ.ರೂಪ, ಮಂಗಳೂರು ಸಹಾಯಕ ಕಮೀಷನರ್ ಮದನ್ಮೋಹನ್ ಸಿ, ಬಂಟ್ವಾಳ ತಾ.ಪಂ.ಇಒ ರಾಜಣ್ಣ, ತಹಶೀಲ್ದಾರ್ ರಶ್ಮಿ ಎಸ್.ಆರ್, ಡಿವೈಎಸ್ಪಿ ವೆಲೆಂಟೈನ್ ಡಿಸೋಜಾ, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ, ನವೀನ್ ಬೆಂಜನಪದವು ಮೊದಲಾದವರು ಉಪಸ್ಥಿತರಿದ್ದರು.
Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ
ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ...








