mohammed-shami | ಟೀಂ ಇಂಡಿಯಾಗೆ ಗುಡ್ ನ್ಯೂಸ್
ಟೀಂ ಇಂಡಿಯಾದ ಹಿರಿಯ ವೇಗಿ ಮೊಹ್ಮದ್ ಶಮಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ಬುಧವಾರ ನಡೆಸಿದ ಕೊರೊನಾ ಪರೀಕ್ಷೆಯಲ್ಲಿ ಶಮಿಗೆ ನೆಗೆಟಿವ್ ರಿಪೋರ್ಟ್ ಬಂದಿದೆ.
ಶಮಿ ಈ ತಿಂಗಳ 17 ರಂದು ಕೊರೊನಾ ಸೋಂಕಿಗೆ ತುತ್ತಾಗಿದ್ದರು.
ಹೀಗಾಗಿ ಅವರು ತವರಿನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ದೂರವಾಗಿದ್ದರು.
ಇದಾದ ಬಳಿಕ ಸದ್ಯ ನಡೆಯುತ್ತಿರುವ ದಕ್ಷಿಣಾಫ್ರಿಕಾ ವಿರುದ್ಧದ ಸರಣಿಯಿಂದ ಕೂಡ ದೂರವಾಗಿದ್ದಾರೆ.

ಅಂದಹಾಗೆ ಮುಂದಿನ ತಿಂಗಳು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ವಿಶ್ವಕಪ್ ಟಿ 20 ಟೂರ್ನಿಗಾಗಿ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದೆ.
ಅದರಲ್ಲಿ ಮೊಹ್ಮದ್ ಶಮಿ ಅವರನ್ನು ಸ್ಟಾಂಡ್ ಬೈ ಆಟಗಾರರನ್ನಾಗಿ ಆಯ್ಕೆ ಮಾಡಿದೆ.
ಹೀಗಾಗಿ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಶಮಿ ಬೌಲಿಂಗ್ ಮಾಡುವುದು ಅನಿವಾರ್ಯವಾಗಿತ್ತು.
ಆದ್ರೆ ಕೊರೊನಾ ಸೋಂಕು ಅವರಿಗೆ ಅಡ್ಡಿಯಾಗಿತ್ತು.
ಇದೀಗ ಅವರು ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ತಂಡಕ್ಕೆ ವಾಪಸ್ ಆಗುತ್ತಾರಾ ಕಾದು ನೋಡಬೇಕು.
Mohammed Shami | ಟೀಂ ಇಂಡಿಯಾಗೆ ಗುಡ್ ನ್ಯೂಸ್








