Karnataka | ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ : ಕಟೀಲ್ ಸ್ಪಷ್ಟನೆ
ಬೆಳಗಾವಿ : ಗುಜರಾತ್ ಜೊತೆಗೆ ಕರ್ನಾಟಕದಲ್ಲಿ ಡಿಸೆಂಬರ್ ನಲ್ಲಿ ಚುನಾವಣೆ ನಡೆಯುತ್ತದೆ ಎಂಬ ವಾದ ಶುರುವಾಗಿದೆ.
ಈ ಬಗ್ಗೆ ಬೆಳಗಾವಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಬರಲ್ಲ.
ನಮ್ಮ ಸರ್ಕಾರದ ಪೂರ್ಣ ಅವಧಿ ಪೂರೈಸುತ್ತವೆ. ನಮಗೆ ಯಾವುದೇ ಚುನಾವಣೆ ದಾವಂತ ಇಲ್ಲ.
ಸಿಎಂ ಆಗೋ ದಾವಂತ ಇರೋದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಗೆ, ನಮ್ಮ ಪಾರ್ಟಿ ಯಲ್ಲಿ ಅಂತಾ ದಾವಂತಗಳು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ಇದೇ ವೇಳೆ ಬೆಳಗಾವಿ ರಾಜಕಾರಣದ ಬಗ್ಗೆ ಮಾತನಾಡಿ, ನಮ್ಮದು ಮತ್ತು ಬಾಲಚಂದ್ರ ಜಾರಕಿಹೊಳಿ, ರಮೇಶ್ ಜಾರಕಿಹೊಳಿ ಗುರಿ ಒಂದೇ ಇದೆ.
ಅದು ಮುಂದಿನ ಚುನಾವಣೆಯಲ್ಲಿ ಬೆಳಗಾವಿಯಲ್ಲಿ18 ಸ್ಥಾನ, ರಾಜ್ಯದಲ್ಲಿ 150 ಸ್ಥಾನ ಗೆಲುವುದು.
ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರನ್ನ ರಾಜಕೀಯ ಸನ್ಯಾಸತ್ವ ಕೊಡಿಸುವ ಸವಾಲನ್ನ ರಮೇಶ್ ಜಾರಕಿಹೊಳಿ ಅವರು ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ರಮೇಶ್ ಜಾರಕಿಹೊಳಿ ಮಂತ್ರಿ ಆಗ್ತಾರಾ ಪ್ರಶ್ನೆಗೆ ಉತ್ತರಿಸಿ, ಖಂಡಿತವಾಗಿಯೂ ರಮೇಶ್ ಜಾರಕಿಹೊಳಿ ಮಂತ್ರಿ ಆಗ್ತಾರೆ.
ಯಾವಾಗ ಆಗ್ತಾರೆ ಅನ್ನೋದು ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟದ್ದು ಎಂದು ಕಟೀಲ್ ಹೇಳಿದ್ದಾರೆ.









