PSI scam: ಎಡಿಜಿಪಿ ಅಮೃತ್ ಪಾಲ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ
ಕರ್ನಾಟಕದಲ್ಲಿ ಪಿಎಸ್‌ಐ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಐಡಿ ಇಲಾಖೆ ಹಿರಿಯ ಐಪಿಎಸ್ ಅಧಿಕಾರಿ ಎಡಿಜಿಪಿ ಅಮೃತ್ ಪಾಲ್ ವಿರುದ್ಧ 1,406 ಪುಟಗಳ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.
ರಾಜ್ಯವನ್ನೇ ಬೆಚ್ಚಿಬೀಳಿಸಿ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿದ್ದ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಮೊದಲ ಹಿರಿಯ ಎಡಿಜಿಪಿ ಮಟ್ಟದ ಅಧಿಕಾರಿ ಅಮೃತ್ ಪಾಲ್.
ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಪ್ರಕರಣದಲ್ಲಿ ಆರೋಪಿ ಅಮೃತ್ ಪಾಲ್ ನನ್ನು 35ನೇ ಆರೋಪಿಯನ್ನಾಗಿ ಮಾಡಲಾಗಿದೆ.
ಪಿಎಸ್‌ಐ ಹುದ್ದೆಗಳಿಗೆ ಅಭ್ಯರ್ಥಿಗಳಿಂದ 1.35 ಕೋಟಿ ರೂಪಾಯಿ ಪಡೆದಿರುವ ಆರೋಪಿಗಳು ಆ ಹಣವನ್ನು ತಮ್ಮ ಆಪ್ತ ಮತ್ತು ಬೇನಾಮಿ ಶಂಭುಲಿಂಗ ಸ್ವಾಮಿಗೆ ನೀಡಿದ್ದಾರೆ ಎಂದು ಇತ್ತೀಚಿನ ತನಿಖೆಯಿಂದ ತಿಳಿದುಬಂದಿದೆ. ಈತನಿಂದ 41 ಲಕ್ಷ ರೂ.ಗಳನ್ನು ಸಿಐಡಿ ವಶಪಡಿಸಿಕೊಂಡಿತ್ತು.
ನೇಮಕಾತಿ ವಿಭಾಗದ ಎಡಿಜಿಪಿಯಾಗಿ ಕಾರ್ಯನಿರ್ವಹಿಸಿದ್ದ ಅಮೃತ್ ಪಾಲ್ ಅವರು 545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ತಮ್ಮ ಜೂನಿಯರ್ ಡಿವೈಎಸ್‌ಪಿ ಶಾಂತಕುಮಾರ್ ಮತ್ತು ತಂಡಕ್ಕೆ ಅವ್ಯವಹಾರ ನಡೆಸಲು ಅವಕಾಶ ನೀಡಿದ್ದರು. ನೇಮಕಾತಿ ವಿಭಾಗದ ಅಧಿಕಾರಿಗಳಾದ ಸುನೀತಾ ಬಾಯಿ, ಆರ್‌ಪಿಐ ಮಂಜುನಾಥ್ ಮತ್ತು ಸಿಬಂದಿಯವರು ಅಮೃತ್ ಪಾಲ್ ಪಾತ್ರವನ್ನು ದೃಢಪಡಿಸುವ ಹೇಳಿಕೆಗಳನ್ನು ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆದರೆ, ತನಗೆ ತಿಳಿಯದಂತೆ ಹಗರಣ ನಡೆದಿದ್ದು, ಹಣ ಪಡೆದಿಲ್ಲ ಎಂದು ಪೌಲ್ ಸಮರ್ಥಿಸಿಕೊಳ್ಳುತ್ತಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್ ಒತ್ತಾಯಿಸಿತ್ತು.
PSI scam: CID submits 1,406-page chargesheet against ADGP Paul Karnataka