Mohammed Siraj | ಟೀಂ ಇಂಡಿಯಾದಿಂದ ಬುಮ್ರಾ ಔಟ್.. ಸಿರಾಜ್ ಇನ್…
ಟೀಂ ಇಂಡಿಯಾದ ವೇಗಿ ಜಸ್ ಪ್ರಿತ್ ಬುಮ್ರಾ ಅವರು ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿದ್ದು ದಕ್ಷಿಣ ಆಫ್ರಿಕಾ ಸರಣಿಯಿಂ ದೂರವಾಗಿದ್ದಾರೆ.
ಇವರ ಬದಲಿಗೆ ಮೊಹ್ಮದ್ ಸಿರಾಜ್ ಅವರನ್ನು ಆಯ್ಕೆ ಮಾಡಲಾಗಿತ್ತು.
ಸೌತ್ ಆಫ್ರಿಕಾ ವಿರುದ್ಧದ ಉಳಿದ 2 ಟಿ20 ಪಂದ್ಯಗಳಿಗೆ ಬುಮ್ರಾ ಬದಲಿಗೆ ಹೈದರಾಬಾದ್ ಸ್ಪೀಡ್ ಸ್ಟಾರ್ ಮೊಹಮ್ಮದ್ ಸಿರಾಜ್ಗೆ ಬುಲಾವ್ ನೀಡಲಾಗಿದೆ.

ಆದರೆ, ಚುಟುಕು ಮಹಾಸಮರಕ್ಕೆ ಆಯ್ಕೆ ಮಾಡುವ ಕುರಿತು ಬಿಸಿಸಿಐ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ.
ದಕ್ಷಿಣ ಆಫ್ರಿಕಾ T20 ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ದೀಪಕ್ ಚಹಾರ್, ಉಮೇಶ್ ಯಾದವ್, ಶ್ರೇಯಸ್ ಅಯ್ಯರ್, ಶಹಬಾಜ್ ಅಹ್ಮದ್, ಮೊಹಮ್ಮದ್ ಸಿರಾಜ್.








