ವಿಮಾನದೊಳಗೆ ಧೂಮಪಾನ ಮಾಡಿದ ವ್ಯಕ್ತಿ- ಟಿಕ್ ಟಾಕ್ ಸ್ಟಾರ್ ಬಂಧನ
ವಿಮಾನದೊಳಗೆ ಧೂಮಪಾನ ಮಾಡಿದ ಘಟನೆಗೆ ಸಂಬಂಧಿಸಿದಂತೆ ಟಿಕ್ ಟಾಕ್ ಸ್ಟಾರ್ ಬಾಬಿ ಕಟಾರಿಯಾ ಅವರನ್ನ ಬಂಧಿಸಲಾಗಿದೆ.
ಆಗಸ್ಟ್ 13 ರಂದು ಬಾಬಿ ಕಟಾರಿಯಾ ಸ್ಪೈಸ್ ಜೆಟ್ ವಿಮಾನದಲ್ಲಿ ಕುಳಿತು ಸಿಗರೇಟ್ ಸೇದುತ್ತಿದ್ದ ವಿಡಿಯೋ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.
ದೆಹಲಿ ಪೊಲೀಸರು ಪ್ರಕರಣದ ತನಿಖೆ ನಡೆಸಿ ಬಾಬಿಕತಾರಿಯಾ ಅವರನ್ನು ಬಂಧಿಸಿದ್ದಾರೆ. ಬಾಬಿಕತಾರಿಯಾ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿತು.
ಬಾಬಿ ಕಟಾರಿಯಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ಆತನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.
SpiceJet flight: Smoking on board…Tik Tok star arrested








