Lokayukta | ಧೂಳಖೇಡ ಆರ್ ಟಿಓ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ
ವಿಜಯಪುರ : ಬೆಳ್ಳಂಬೆಳಿಗ್ಗೆ ವಿಜಯಪುರದ ಧೂಳಖೇಡ RTO ಚೆಕ್ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಹಾರಾಷ್ಟ್ರ ಗಡಿಯಲ್ಲಿರುವ ಧೂಳಖೇಡ್ RTO ಚೆಕ್ ಪೋಸ್ಟ್ ಇದಾಗಿದ್ದು, ಲಂಚ ಸ್ವೀಕರಿಸುತ್ತಿರುವ ಆರೋಪ ಕೇಳಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.
ಲೋಕಾಯುಕ್ತ ಎಸ್ ಪಿ ಅನಿತಾ ನೇತೃತ್ವದಲ್ಲಿ ನಡೆದ ದಾಳಿ ಇದಾಗಿದ್ದು, ಚೆಕ್ ಪೋಸ್ಟ್ನಲ್ಲಿ ಸಂಗ್ರಹವಾಗಿದ್ದ 3 ರಿಂದ 4 ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ.

ಅಲ್ಲದೆ ಪ್ರಮುಖ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರಿಗೆ ಶಾಕ್ ನೀಡಿದ್ದಾರೆ.
ಲೋಕಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ರಾಜ್ಯದ 9 ಕಡೆಗಳಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.








