‘ಚಿರು’ ಎಂದೇ ಅಭಿಮಾನಿಗಳಿಂದ ಕರೆಯಿಸಿಕೊಳ್ಳುತ್ತಿದ್ದ ಚಿರಂಜೀವಿ ಸರ್ಜಾ (39) ಇಹಲೋಕ ತ್ಯಜಿಸಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಸರ್ಜಾ ಅವರಿಗೆ ನಿನ್ನೆ ರಾತ್ರಿ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 3:30ರ ಸುಮಾರಿಗೆ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ
ಚಲನಚಿತ್ರಗಳಲ್ಲಿ ನಾಯಕ ನಟನಾಗಿ ಕಾಣಿಸಿಕೊಂಡಿದ್ದ
ಅವರು ನಟ ದ್ರುವಸರ್ಜಾನ ಅಣ್ಣ ಮತ್ತು ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಸೋದರಳಿಯ ಅಷ್ಟಲ್ಲದೇ ಕನ್ನಡದ ಅನುಭವ ನಟ, ಶಕ್ತಿ ಪ್ರಸಾದ್ ರವರ ಮೊಮ್ಮಗ.








