ಬೆಂಗಳೂರು, ಜೂನ್ 7 : ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ(39) ಅವರ ಅಂತ್ಯಕ್ರಿಯೆಯನ್ನು ನಾಳೆ ಮಧುಗಿರಿಯ ಜಕ್ಕೇನಹಳ್ಳಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ. ನಾಳೆ ಬೆಳಗ್ಗೆ 11 ಗಂಟೆ ಸುಮಾರಿಗೆ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ಮಧುಗಿರಿಯಲ್ಲಿ ಅವರ ಕುಟುಂಬಕ್ಕೆ ಸೇರಿದ ಜಾಗದಲ್ಲಿ ನಡೆಸಲಾಗುತ್ತದೆ ಎಂದು ಹೇಳಲಾಗುತ್ತಿದೆ.
ಚಿರಂಜೀವಿ ಸರ್ಜಾ ತಾತ ಶಕ್ತಿಪ್ರಸಾದ್ ಅವರ ಸ್ವಗ್ರಾಮವಾದ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಜಕ್ಕೇನಹಳ್ಳಿ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಹೇಳಲಾಗಿದ್ದು, ಚಿರಂಜೀವಿ ಸರ್ಜಾ ಕುಟುಂಬಸ್ಥರು ಚೆನ್ನೈನಲ್ಲಿರುವ ಅರ್ಜುನ್ ಸರ್ಜಾ ಹಾಗೂ ಚಿರು ಅವರ ಅಜ್ಜಿಯ ಬರುವಿಕೆಗಾಗಿ ಕಾಯುತ್ತಿದ್ದಾರೆ.
ಬೆಂಗಳೂರಿನ ಚಿರು ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದ್ದು, ಮನೆ ಸುತ್ತ ಬ್ಯಾರಿಕೇಡ್ ಗಳನ್ನು ಅಳವಡಿಸಲಾಗುತ್ತಿದೆ. ಕೊರೋನಾ ಸೋಂಕಿನ ಹಿನ್ನಲೆಯಲ್ಲಿ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕೆ ಅವಕಾಶ ಇಲ್ಲ ಎಂದು ಹೇಳಲಾಗುತ್ತಿದ್ದು, ಸರ್ಜಾ ಕುಟುಂಬದ ಆತ್ಮೀಯರು ಹಾಗೂ ಸ್ಯಾಂಡಲ್ ವುಡ್ ನ ಗಣ್ಯರಿಗೆ ಮಾತ್ರ ಅವಕಾಶ ನೀಡುವ ಸಾಧ್ಯತೆಗಳಿವೆ.








