Tejasvi Surya | ರಾಗಾ ಭಾರತ್ ಜೋಡೋ ಯಾತ್ರೆ ಬಗ್ಗೆ ತೇಜಸ್ವಿ ಸೂರ್ಯ ಟೀಕೆ
ಕೋಲಾರ : ಭಾರತ್ ಜೋಡೋ ಯಾತ್ರೆ ಮಾಡುವುದಕ್ಕೂ ಮುಂಚೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಜೋಡೋ ಮಾಡಲಿ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆದ ಬಗ್ಗೆ ಕೋಲಾರದಲ್ಲಿ ಮಾತನಾಡಿದ ತೇಜಸ್ವಿ ಸೂರ್ಯ, ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮಾಡುವುದಕ್ಕೂ ಮುಂಚೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಜೋಡೋ ಮಾಡಲಿ.
ರಾಜಸ್ಥಾನದಲ್ಲಿ ಗೆಹ್ಲೋಟ್ ಹಾಗೂ ಸಚಿನ್ ಪೈಲಟ್ ಅವರನ್ನು ಜೋಡೋ ಮಾಡಲಿ.
ಪಕ್ಷದಲ್ಲಿಯೇ ಹುಳುಕು ಇಟ್ಟುಕೊಂಡು ದೇಶವನ್ನು ಒಂದು ಮಾಡುತ್ತೀನೆ ಎಂದು ಹೊರಟಿರುವುದು ದೇಶದ ಜನರ ಮುಂದೆ ನಗೆಪಾಟಲಿಗೀಡಾಗಿದ್ದೀರಿ ಎಂದು ಕುಟುಕಿದ್ದಾರೆ.
ಅಲ್ಲದೇ ದೇಶ ವಿಭಜನೆ ಮಾಡುವ ಶಕ್ತಿಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪೋತ್ಸಾಹ ನೀಡುತ್ತಿದ್ದಾರೆ ಎಂದು ಆರೋಪಿಸಿದ ತೇಜಸ್ವಿ ಸೂರ್ಯ, ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಬಲವಂತವಾಗಿ ಅಧ್ಯಕ್ಷ ಪಟ್ಟವನ್ನು ನೀಡಲಾಗುತ್ತಿದೆ.
ಮೂರು ವರ್ಷಗಳಿಂದ ಅಧ್ಯಕ್ಷರನ್ನೆ ನೇಮಕ ಮಾಡಿಕೊಳ್ಳಲು ನಿಮ್ಮಿಂದ ಆಗಲಿಲ್ಲ ಅಂದರೇ ಇನ್ನು ದೇಶವನ್ನ ಹೇಗೆ ನಡೆಸುತ್ತೀರಿ ಎಂದು ಪ್ರಶ್ನಿಸಿದ್ದಾರೆ.