ಭದ್ರತಾ ಪಡೆಗಳ ಗುಂಡಿನ ದಾಳಿಗೆ ನಾಲ್ವರು ಭಯೋತ್ಪಾದಕರು ಹತ……
ಜಮ್ಮು ಮತ್ತು ಕಾಶ್ಮೀರದಲ್ಲಿ ಬುಧವಾರ ನಡೆದ ಎರಡು ಎನ್‌ಕೌಂಟರ್‌ಗಳಲ್ಲಿ ನಾಲ್ವರು ಭಯೋತ್ಪಾದಕರು ಹತರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಎರಡು ಎನ್‌ಕೌಂಟರ್‌ಗಳಲ್ಲಿ ಮೂವರು ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕರು ಮತ್ತು ಒಬ್ಬ ಸ್ಥಳೀಯ ಭಯೋತ್ಪಾದಕರು ಹತರಾಗಿದ್ದಾರೆ.
ಶೋಪಿಯಾನ್‌ನ ಮುಲು ಮತ್ತು ದ್ರಾಚ್ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿವೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಗುಂಡು ಹಾರಿಸುತ್ತಿವೆ,’’ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ. ಬಾರಾಮುಲ್ಲಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಆಗಮಿಸಿದ ಒಂದು ದಿನದ ನಂತರ ಎನ್‌ಕೌಂಟರ್ ನಡೆದಿದೆ. ಮೂರು ದಿನಗಳ ಹಿಂದೆ, ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನ ಬಾಸ್ಕುಚಾನ್ ಇಮಾಮಸಾಹಿಬ್ ಪ್ರದೇಶದಲ್ಲಿ ಕಾರ್ಡನ್ ಸರ್ಚ್ ಆರಂಭಿಸಿದ್ದವು. ಈ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಗೆ ಸಂಬಂಧಿಸಿದ ಭಯೋತ್ಪಾದಕನನ್ನು ಭದ್ರತಾ ಸಿಬ್ಬಂದಿ ಹತ್ಯೆ ಮಾಡಿದ್ದಾರೆ.
Encounters: in jammu kashmir Four terrorists killed in firing by security forces