ಬೆಂಗಳೂರು : ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಇಂದು ನಾಮಪತ್ರ ಸಲ್ಲಸಿಸಲು ಸಿದ್ದರಾಗಿದ್ದಾರೆ. ಇದಕ್ಕೂ ಮುನ್ನ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಇದಾದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ‘ಬಿ’ ಫಾರಂ ನೀಡಿದರು. ಈ ವೇಳೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ಸತೀಶ್ ಜಾರಕಿಹೊಳಿ, ಮಾಜಿ ಅಧ್ಯಕ್ಷರಾದ ಆರ್.ವಿ ದೇಶಪಾಂಡೆ, ಡಾ.ಜಿ. ಪರಮೇಶ್ವರ್, ದಿನೇಶ್ ಗುಂಡೂರಾವ್ ಮತ್ತಿತರ ನಾಯಕರು ಉಪಸ್ಥಿತರಿದ್ದರು.
ಆತ್ಮಹತ್ಯೆಗೆ ಶರಣಾದ ಟೆಕ್ಕಿ
ಮಂಡ್ಯ: ಯುವನಕೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಘಟನೆ ಮಂಡ್ಯ (Mandya) ಜಿಲ್ಲೆ ಮದ್ದೂರು (Maddur) ತಾಲೂಕಿನ ಕುರುಬರದೊಡ್ಡಿ (Kurubaradoddi) ಗ್ರಾಮದಲ್ಲಿ ನಡೆದಿದೆ....