ಹೊಸದಿಲ್ಲಿ, ಜೂನ್ 8: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾರ್ಭಟ ದಿನದಿಂದ ದಿನಕ್ಕೆ ಜೋರಾಗಿ ಬಾಧಿಸುತ್ತಿದ್ದು, ಇಲ್ಲಿಯವರೆಗೆ ಒಟ್ಟು 27,654 ಕೊರೋನಾ ಸೋಂಕು ಪ್ರಕರಣಗಳು ದಾಖಲಾಗಿವೆ.
ಈ ಮಧ್ಯೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅನಾರೋಗ್ಯಕ್ಕೆ ಒಳಗಾಗಿದ್ದು, ತಮ್ಮನ್ನು ತಾವೇ
ಐಸೋಲೇಶನ್ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಎಲ್ಲೆಡೆಯೂ ಕೊರೊನಾದ ಸೋಂಕು ವ್ಯಾಪಕವಾಗಿ ಹರಡಿರುವ ಹಿನ್ನಲೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ದೆಹಲಿ ಮುಖ್ಯಮಂತ್ರಿ ಮಂಗಳವಾರ ಕರೋನಾ ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನಿನ್ನೆಯಿಂದ ಶೀತ , ಕೆಮ್ಮು , ಜ್ವರ ಕಾಣಿಸಿಕೊಂಡಿದ್ದು, ವೈದ್ಯರ ಸಲಹೆಯ ಮೇರೆಗೆ ಐಸೋಲೇಶನ್ ಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ.
ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯಲ್ಲಿ ನೂರಾರು ಕೋಟಿ ರೂಪಾಯಿ ಸೋರಿಕೆ ಮತ್ತು ದುರ್ಬಳಕೆಯಾಗಿರುವುದು ಪತ್ತೆಯಾಗಿದ್ದು, ಇದನ್ನು ತಡೆಯಲು ಸರ್ಕಾರ ಈಗ...








