ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನ…
ಸಮಾಜವಾದಿ ಪಕ್ಷದ ಸಂಸ್ಥಾಪಕ ಹಾಗೂ ಉತ್ತರ ಪ್ರದೇಶದ ಮೂರು ಬಾರಿ ಮುಖ್ಯಮಂತ್ರಿಯಾಗಿದ್ದ ಮುಲಾಯಂ ಸಿಂಗ್ ಯಾದವ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ 10 ದಿನಗಳಿಂದ ಮೇದಾಂತ ಅವರ ಐಸಿಯು ಮತ್ತು ಕ್ರಿಟಿಕಲ್ ಕೇರ್ ಯುನಿಟ್ (ಸಿಸಿಯು) ನಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ನೇತಾಜಿ ಸೋಮವಾರ ಬೆಳಗ್ಗೆ 8:16ಕ್ಕೆ ಕೊನೆಯುಸಿರೆಳೆದರು.
ಮೂತ್ರದ ಸೋಂಕು, ರಕ್ತದೊತ್ತಡ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ನೇತಾಜಿ ಅವರನ್ನು ಅಕ್ಟೋಬರ್ 2 ರಂದು ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಅವರು ಸೋಮವಾರ ಬೆಳಿಗ್ಗೆ ನಿಧನರಾದರು, ಅವರಿಗೆ 82 ವರ್ಷ ವಯಸ್ಸಾಗಿತ್ತು.
ಮುಲಾಯಂ ಸಿಂಗ್ ಯಾದವ್ ಅವರ ನಿಧನದಿಂದಾಗಿ ದೇಶಾದ್ಯಂತ ಅವರ ಬೆಂಬಲಿಗರು ಮತ್ತು ರಾಜಕೀಯ-ಸಾಮಾಜಿಕ ಕಾರ್ಯಕರ್ತರಲ್ಲಿ ಶೋಕದ ಅಲೆ ಎದ್ದಿದೆ.
ಮುಲಾಯಂ ಸಿಂಗ್ ಯಾದವ್ ಅವರ ಪುತ್ರ ಮತ್ತು ಯುಪಿ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಕೂಡ ಅವರ ಸಾವನ್ನು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ‘ನನ್ನ ಗೌರವಾನ್ವಿತ ತಂದೆ ಇನ್ನಿಲ್ಲ. ಎಂದು ಟ್ವೀಟ್ ಮಾಡಿದ್ದಾರೆ.
ಮುಲಾಯಂ ಸಿಂಗ್ ಯಾದವ್ ನಿಧನದ ಮಾಹಿತಿ ತಿಳಿಯುತ್ತಿದ್ದಂತೆಯೇ ಮೇದಾಂತ ಆಸ್ಪತ್ರೆಯಲ್ಲಿ ಅವರ ಬೆಂಬಲಿಗರು, ಕುಟುಂಬಸ್ಥರು, ರಾಜಕೀಯ ಮುಖಂಡರು-ಕಾರ್ಯಕರ್ತರ ದಂಡು ಜಮಾಯಿಸತೊಡಗಿತು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
Mulayam Singh Yadav, Samajwadi Party founder, dies at 82