ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Ashwini Puneeth Rajkumar-ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್ ಲೋಗೋ ಲಾಂಚ್ ಇವೆಂಟ್ ಗೆ “ಅಶ್ವಿನಿ ಪುನೀತ್ ರಾಜ್ ಕುಮಾರ್ ಚಾಲನೆ”

Ashwini Puneeth Rajkumar-ಇದೇ ತಿಂಗಳ 21ರಿಂದ ಮೂರು ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ ಅಪ್ಪು ಕಪ್ ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್ ಲೋಗೋ ಲಾಂಚ್ ಇವೆಂಟ್

Ranjeeta MY by Ranjeeta MY
October 10, 2022
in Cinema, Newsbeat, ಮನರಂಜನೆ
Ashwini Puneeth Rajkumar

Ashwini Puneeth Rajkumar

Share on FacebookShare on TwitterShare on WhatsappShare on Telegram

Ashwini Puneeth Rajkumar-ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ಆಯೋಜಿಸಿರುವ ‘ಅಪ್ಪು ಕಪ್’ ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್ ನ ಲೋಗೋ, ಜರ್ಸಿ, ಥೀಮ್ ಸಾಂಗ್ ಲಾಂಚ್ ಉದ್ಘಾಟನಾ ಸಮಾರಂಭ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಿನ್ನೆ ನೆರವೇರಿದೆ. ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಆಟಗಾರರಿಗೆ ಶುಭಾಶಯ ಕೋರಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಚಿವ R. ಅಶೋಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿಯಾಗಿದ್ದರು.

ಅಪ್ಪು ಕಪ್ ಬ್ಯಾಡ್ಮಿಂಟನ್ ಬಗ್ಗೆ ಮಾತಾನಾಡಿದ ಸಚಿವ ಆರ್ ಅಶೋಕ್, ಅಪ್ಪು ಕಪ್ ಬ್ಯಾಡ್ಮಿಂಟನ್ ಲೀಗ್ ಉದ್ಘಾಟನೆಯಾಗಿದೆ. ಎಲ್ಲರೂ ನಿಮ್ಮ ಅಭಿಪ್ರಾಯ ಹಂಚಿಕೊಂಡಿದ್ದೀರಾ. ಎಲ್ಲರೂ ನಾನೇ ಗೆಲ್ಲುತ್ತೇನೆ ಎಂದು ಹೇಳಿದ್ದೀರಾ. ಇದು ಪ್ರತಿಯೊಬ್ಬ ಆಟಗಾರನ ಆತ್ಮವಿಶ್ವಾಸ. ಎಲ್ಲರೂ ಗೆಲ್ಲಲು ಸಾಧ್ಯವಿಲ್ಲ. ಒಬ್ಬರೇ ಗೆಲ್ಲಲು ಆಗುವುದು. ಅಪ್ಪು ಹೆಸರಲ್ಲಿ ಮಾಡುತ್ತಿರುವ ಈ ಪಂದ್ಯಾವಳಿ ಯಶಸ್ವಿಯಾಗಲಿ. ಎಲ್ಲರಿಗೂ ಒಳ್ಳೆಯದಾಗಲಿ ಎಂದ ಅವರು, ಅಪ್ಪು ಒಟ್ಟಿಗಿನ ಒಡನಾಟ ಬಿಚ್ಚಿಟ್ಟರು. ರಾಜ್ ಕುಮಾರ್ ಅವರಲ್ಲಿದ್ದ ಗುಣಗಳು ಅಪ್ಪುವಿನಲ್ಲಿದ್ದವು. ನವೆಂಬರ್ ತಿಂಗಳಲ್ಲಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡುತ್ತವೆ ಎಂದರು.

Related posts

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

February 12, 2026
ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

February 12, 2026

ಕನ್ನಡ ಚಲನಚಿತ್ರ ಕಲಾವಿದರು ಮತ್ತು ತಂತ್ರಜ್ಞರು ಆಡ್ತಿರೋ ಈ ಪಂದ್ಯಾವಳಿಯಲ್ಲಿ ಜಾಕಿ ರೈಡರ್ಸ್, ರಾಜ್ ಕುಮಾರ್ ಕಿಂಗ್ಸ್, ಅರಸು ಹಂಟರ್ಸ್, ಬಿಂದಾಸ್ ಸೂಪರ್ ಸ್ಟಾರ್ಸ್, ಮಯೂರ್ ಸ್ಟ್ರೈಕರ್ಸ್, ಜೇಮ್ಸ್ ವಾರಿಯರ್, ಪವರ್ ಪೈಥಾನ್, ದೊಡ್ಮನೆ ಡ್ರ್ಯಾಗನ್ ಸೇರಿದಂತೆ ಎಂಟು ತಂಡಗಳು ಭಾಗಿಯಾಗಲಿವೆ. ದಿಗಂತ್, ಸೃಜನ್ ಲೋಕೇಶ್, ವಸಿಷ್ಠ ಸಿಂಹ, ಪ್ರಿಯಾಂಕಾ ಉಪೇಂದ್ರ, ರಾಗಿಣಿ, ಕವಿತಾ ಲಂಕೇಶ್, ಶ್ವೇತಾ ಶ್ರೀವಾಸ್ತವ್, ಮಾಸ್ಟರ್ ಆನಂದ್ ತಂಡಗಳನ್ನು ಮುನ್ನೆಡೆಸಲಿದ್ದಾರೆ. ಇದರ ಜೊತೆಗೆ ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳು ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾಗಿಯಾಗಲಿದ್ದಾರೆ.

ನಟ ಚೇತನ್ ಸೂರ್ಯ ತಮ್ಮದೇ ಸ್ಟೆಲ್ಲರ್ ಸ್ಟುಡಿಯೋ ಅಂಡ್ ಇವೆಂಟ್ ನಡಿ ಈ ಪಂದ್ಯಾವಳಿ ಆಯೋಜಿಸಿದ್ದು, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ ಮಾ ಹರೀಶ್ ಚೇತನ್ ಗೆ ಸಾಥ್ ಕೊಟ್ಟಿದ್ದಾರೆ. ಇದೇ ತಿಂಗಳ 21ರಿಂದ ಮೂರು ದಿನಗಳ ಕಾಲ ಅಪ್ಪು ನೆನಪಿನಲ್ಲಿ ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್ ನಡೆಯಲಿದೆ. ಇನ್ನು ಜಾಕಿ ರೈಡರ್ಸ್ ತಂಡದ ಒಡೆತನದ ಜವಾಬ್ದಾರಿಯನ್ನು ಅಪ್ಲೆಕ್ಸ್ ಸಾಫ್ಟ್‌ವೇರ್ ಮಾಲೀಕರಾದ ಗಿರೀಶ್ ಕುಮಾರ್ ಹೊತ್ತುಕೊಂಡಿದ್ರೆ, ರಾಜ್ ಕುಮಾರ್ ಕಿಂಗ್ಸ್ ತಂಡಕ್ಕೆ ನಿರ್ಮಾಪಕ ರವಿಕುಮಾರ್ ಬಿ ಮಾಲೀಕರು, ಅರಸು ಹಂಟರ್ಸ್ ಟೀಂ ನಮೋ ವೆಲ್ ನೆಸ್ ಮಾಲೀಕ ಮಹೀಂದ್ರ, ಬಿಂದಾಸ್ ಸೂಪರ್ ಸ್ಟಾರ್ಸ್ ತಂಡಕ್ಕೆ ನಿರ್ಮಾಪಕಿ ರಾಮದೇವಿ, ಜೇಮ್ಸ್ ವಾರಿಯರ್ ತಂಡಕ್ಕೆ ಬ್ಯಾಡ್ಮಿಂಟನ್ ಅಕಾಡೆಮಿ ಮಾಲೀಕ ಚಂದ್ರಶೇಖರ್, ಪವರ್ ಪೈಥಾನ್ ತ‌ಂಡಕ್ಕೆ ಬಿಗ್ ಮೇಕರ್ಸ್ ಮಾಲೀಕ ಸಂತೋಷ್, ದೊಡ್ಮನೆ ಡ್ರ್ಯಾಗನ್ ತಂಡಕ್ಕೆ ನಿರ್ಮಾಪಕ ಮಂಜುನಾಥ್ ಸುಪುತ್ರ ಹರ್ಷ, ಮಯೂರ್ ಸ್ಟ್ರೈಕರ್ ತಂಡದ ಒಡೆತನವನ್ನು ಗುಬ್ಬಿ ವೀರಣ್ಣ ಮೊಮ್ಮಗ ಹಾಗೂ ಕಾರ್ನರ್ ಹೌಸ್ ಮಾಲೀಕ ಶಿವಪ್ರದೀಪ್ ಹೊತ್ತುಕೊಂಡಿದ್ದಾರೆ.

Tags: ashwinipuneethrajkumar
ShareTweetSendShare
Join us on:

Related Posts

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

by Shwetha
February 12, 2026
0

ನವದೆಹಲಿ: ಕಳೆದ ಕೆಲವು ದಿನಗಳಿಂದ ಸಂಸತ್ತಿನಲ್ಲಿ ನಡೆಯುತ್ತಿದ್ದ ನಿರಂತರ ಗದ್ದಲ ಮತ್ತು ಕೋಲಾಹಲಗಳ ನಡುವೆಯೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ...

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

by Shwetha
February 12, 2026
0

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಮತ್ತೆ ಕೇಳಿಬರುತ್ತಿವೆ. ಬೂದಿ ಮುಚ್ಚಿದ ಕೆಂಡದಂತಿದ್ದ ಸಿಎಂ ಕುರ್ಚಿ ಬದಲಾವಣೆಯ ವಿಚಾರ ಈಗ ಮತ್ತೆ...

ಸಿಎಂ ಪಟ್ಟದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ.. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಸಿಎಂ

ಸಿಎಂ ಪಟ್ಟದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ.. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಸಿಎಂ

by Shwetha
February 12, 2026
0

ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ನಾನಾಗಲಿ, ಡಿಕೆ ಶಿವಕುಮಾರ್ ಆಗಲಿ,...

ಇಕ್ಬಾಲ್ ಹುಸೇನ್, ಉಗ್ರಪ್ಪನಿಗೆ ನೋಟಿಸ್ ಕೊಡುವಾಗ ಇರುವ ನಿಮ್ಮ ‘ಪೌರುಷ’ ಯತೀಂದ್ರಗೆ ನೋಟಿಸ್ ನೀಡಲು ಯಾಕಿಲ್ಲ?ಡಿಕೆಶಿಗೆ ಬಿಜೆಪಿ ನೇರ ಸವಾಲು!

ಇಕ್ಬಾಲ್ ಹುಸೇನ್, ಉಗ್ರಪ್ಪನಿಗೆ ನೋಟಿಸ್ ಕೊಡುವಾಗ ಇರುವ ನಿಮ್ಮ ‘ಪೌರುಷ’ ಯತೀಂದ್ರಗೆ ನೋಟಿಸ್ ನೀಡಲು ಯಾಕಿಲ್ಲ?ಡಿಕೆಶಿಗೆ ಬಿಜೆಪಿ ನೇರ ಸವಾಲು!

by Shwetha
February 12, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿನ ಆಂತರಿಕ ಕಚ್ಚಾಟ ಹಾಗೂ ಆಡಳಿತ ವೈಫಲ್ಯಗಳ ಕುರಿತು ಪ್ರತಿಪಕ್ಷ ಬಿಜೆಪಿ ವಾಗ್ದಾಳಿ ಮುಂದುವರಿಸಿದ್ದು, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

ತನ್ನ ಮರ ಕಡಿದಿದ್ದಕ್ಕೆ ಸರ್ಕಾರದ ಶ್ರೀಗಂಧದ ಮರಕ್ಕೆ ಕೊಡಲಿ ಏಟು: ವಿಧಾನಸೌಧದ ಬಳಿ ರೈತನ ವಿನೂತನ ಪ್ರತಿಭಟನೆ

ತನ್ನ ಮರ ಕಡಿದಿದ್ದಕ್ಕೆ ಸರ್ಕಾರದ ಶ್ರೀಗಂಧದ ಮರಕ್ಕೆ ಕೊಡಲಿ ಏಟು: ವಿಧಾನಸೌಧದ ಬಳಿ ರೈತನ ವಿನೂತನ ಪ್ರತಿಭಟನೆ

by Shwetha
February 12, 2026
0

ಬೆಂಗಳೂರು:ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಮಂಗಳವಾರ ಮಧ್ಯಾಹ್ನ ಹೈಡ್ರಾಮಾ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ತಮ್ಮ ಜಮೀನಿನಲ್ಲಿದ್ದ ಬೆಲೆಬಾಳುವ ಮರಗಳನ್ನು ತೆರವುಗೊಳಿಸಿದ ಸರ್ಕಾರ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram