Jharkhand gangrape: ತಾಯಿಯ ಎದುರೆ ಮಗಳ ಮೇಲೆ ಅತ್ಯಾಚಾರ…
ಅಪ್ರಾಪ್ತ ಬಾಲಕಿಯ ಮೇಲೆ ತಾಯಿಯ ಎದುರೇ ಐದು ಮಂದಿ ಸಾಮೂಹಿಕ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಮಂಗಳವಾರ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಇಬ್ಬರನ್ನು ಬಂಧಿಸಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ ಎಂದು ದಿಯೋಘರ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದುಮ್ಕಾ ಜಿಲ್ಲೆಯ ನಿವಾಸಿಗಳಾದ ಬಾಲಕಿ ಮತ್ತು ಆಕೆಯ ತಾಯಿ ಭಾನುವಾರ ದಿಯೋಘರ್‌ನಲ್ಲಿ ಕಾರ್ಯಕ್ರಮ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಮಧುಪುರ್ ಪ್ರದೇಶದಲ್ಲಿ ದಾಳಿಗೆ ಒಳಗಾಗಿದ್ದಾರೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಬಿ ರೌತ್ ಮಾಹಿತಿ ನೀಡಿದ್ದಾರೆ.
ಸಂತ್ರಸ್ತೆಯ ತಾಯಿ ಸೋಮವಾರ ಪೊಲೀಸರಿಗೆ ದೂರು ನೀಡಿದ್ದು, ಇಬ್ಬರನ್ನು ಬಂಧಿಸಲಾಗಿದೆ. ದೂರಿನಲ್ಲಿ ತಿಳಿಸಿರುವ ಪ್ರಕಾರ ಎರಡು ಬೈಕ್ ಗಳಲ್ಲಿ ಬಂದ ಐದು ಜನರು ಇವರಿಬ್ಬರನ್ನ ದಾರಿ ತಪ್ಪಿಸಿ ನಂತರ ಮಗಳನ್ನ ಬಲವಂತವಾಗಿ ಪಕ್ಕಕ್ಕೆ ಕೆರೆದೊಯ್ದು ಅತ್ಯಾಚಾರ ನಡೆಸಿದ್ದಾರೆ. ತಡೆಯಲು ಮುಂದಾದಾಗ ತಾಯಿಯನ್ನ ಥಳಿಸಿ ಆಕೆಯ ಎದುರೆ ಬಾಲಕಿ ಮೇಲೆ ಅತ್ಯಾಚಾರ ವೆಸಗಿದ್ದಾರೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.
ದಿಯೋಘರ್ ಪೊಲೀಸ್ ಅಧೀಕ್ಷಕ (ಎಸ್‌ಪಿ) ಸುಭಾಷ್ ಚಂದ್ರ ಜಾಟ್ ಮಾತನಾಡಿ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿಗಳನ್ನು ನಿರೀಕ್ಷಿಸಲಾಗಿದೆ. ಪೊಲೀಸರು ಆರೋಪಿಗಳನ್ನು ಗುರುತಿಸಿದ್ದು, ಉಳಿದ ಮೂವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
Jharkhand gangrape : Minor gang-raped by 5 men in front of mother in Deogarh, 2 arrested








